Advertisement -Home Add

ದೇಶದಲ್ಲಿ 48 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಒಂದೇ ದಿನ 92,071 ಜನರಲ್ಲಿ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 92,071 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 48,46,428ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,136 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 79,722ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,86,598 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 37,80,108 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.