Advertisement -Home Add
Chandargi Sports School
Wanted Home Add

ಇಂದು ರಾತ್ರಿಯಿಂದ ರಾಜ್ಯಾದ್ಯಂತ ಕರ್ಫ್ಯೂ ಜಾರಿ

ಅಗತ್ಯ ವಸ್ತು, ಆಸ್ಪತ್ರೆಗಳು ಮಾತ್ರ ಲಭ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಫೋಟಕ್ಕೆ ಜನರು ತತ್ತರಗೊಂಡಿದ್ದು, ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಇಂದು ರತರಿ 8 ಗಂಟೆಯಿಂದ ಕರ್ಫ್ಯೂ ಜಾರಿಗೊಳಿಸಿದೆ.

ಕೊರೊನಾ ನಿಯಂತ್ರಣಕ್ಕಾಗಿ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಇಂದು ರಾತ್ರಿ 8ರ ನಂತರ ಬೇಕಾಬಿಟ್ಟಿಯಾಗಿ ಓಡಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ.

ಹಣ್ಣು, ತರಕಾರಿ, ದಿನಸಿ ಪದಾರ್ಥ, ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್, ಎಂದಿನಂತೆ ಡಾಕ್ಟರ್ಸ್, ನರ್ಸ್, ಆಂಬುಲೆನ್ಸ್, ಓಡಾಟವಿರಲಿದೆ. ಅನಾರೋಗ್ಯ ಸಮಸ್ಯೆವುಳ್ಳರಿಗೆ ಆಸ್ಪತ್ರೆಗೆ ಹೋಗಲು , ಗರ್ಭಿಣಿ ಸ್ತ್ರೀಯರಿಗೆ ತಪಾಸಣೆಗೆ ಹಾಗೂ ತುರ್ತು ಚಿಕಿತ್ಸೆ, ರೋಗಿಗಳಿಗೆ ಆಸ್ಪತ್ರೆಗೆ ಹೋಗಲು ಅವಕಾಶ ನೀಡಲಾಗುತ್ತಿದೆ.

ಆಟೋ, ಕ್ಯಾಬ್, ಬೈಕ್, ಬಾರ್, ಸೆಲೂನ್, ಬ್ಯೂಟಿ ಪಾರ್ಲರ್, ಪಾರ್ಕ್, ಗಾರ್ಮೆಂಟ್ಸ್, ಫ್ಯಾಕ್ಟರಿ, ಕಾರ್ಖಾನೆಗಳು, ಕಂಪನಿಗಳು ಸ್ತಬ್ಧಗೊಳ್ಳಲಿದೆ.

ಮದ್ಯದಂಗಡಿ ಸಂಪೂರ್ಣ ಬಂದ್, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಓಡಾಟವಿರುವುದಿಲ್ಲ. ಹೋಟೆಲ್‍ಗಳಲ್ಲಿ ಪಾರ್ಸಲ್ ಗಳಿಗೆ ಮಾತ್ರ ಅವಕಾಶ. ಬೆಂಗಳೂರಿನಲ್ಲಿ ಎಲ್ಲಾ ಫ್ಲೈಓವರ್‌ಗಳು ಇಂದು ಸಂಜೆಯಿಂದ ಬಂದ್ ಆಗಲಿವೆ.