Advertisement -Home Add
Crease wise (28th Jan)
KLE1099 Add

ಕಾಂಗ್ರೆಸ್ ನಿಯೋಗದಿಂದ ಮುಖ್ಯಕಾರ್ಯದರ್ಶಿ ಭೇಟಿ

ಚಾಮರಾಜನಗರ ಪ್ರಕರಣ ಸೇರಿದಂತೆ ಕೊರೊನಾ ದುಸ್ಥಿತಿ ಬಗ್ಗೆ ಚರ್ಚೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 24 ಮಂದಿಯನ್ನು ಬಲಿ ತೆಗೆದುಕೊಂಡಿರುವ ಚಾಮರಾಜನಗರ ಆಕ್ಸಿಜನ್ ದುರಂತ ಸೇರಿದಂತೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಕೊರೊನಾ ದುಸ್ಥಿತಿ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಶಾಸಕರು, ಸಂಸದರನ್ನು ಒಳಗೊಂಡ ಕಾಂಗ್ರೆಸ್ ನಿಯೋಗವು ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಮನವಿ ಸಲ್ಲಿಸಿತು.

ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಸಂಸದ ಡಿ.ಕೆ. ಸುರೇಶ್, ರಾಜ್ಯಸಭೆ ಸದಸ್ಯ ಎಲ್. ಹನುಮಂತಯ್ಯ, ಶಾಸಕರಾದ ವೆಂಕಟರಮಣಯ್ಯ, ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್, ಎಸ್. ರವಿ, ಯು.ಬಿ. ವೆಂಕಟೇಶ್, ನಾಸೀರ್ ಹುಸೇನ್, ಪಿ.ಆರ್. ರಮೇಶ್ ಮತ್ತಿತರರು ನಿಯೋಗದಲ್ಲಿದ್ದರು.