GIT add 2024-1
Laxmi Tai add
Beereshwara 33

ಖ್ಯಾತ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯ ಕೊರೊನಾಗೆ ಬಲಿ

ಬಂಡಾಯ ಸಾಹಿತಿ ಎಂದೇ ಖ್ಯಾತರಾಗಿದ್ದ ಸಿದ್ದಲಿಂಗಯ್ಯ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಂಡಾಯ ಸಾಹಿತಿ, ಹಿರಿಯ ಕವಿ ಡಾ.ಸಿದ್ದಲಿಂಗಯ್ಯ(66) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ಕೆಲ ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತಿದ್ದ ಡಾ.ಸಿದ್ದಲಿಂಗಯ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದ ಅವರಿಗೆ ಮತ್ತೆ ಉಸಿರಾಟದ ತೊಂದರೆ ತೀವ್ರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ದಲಿತ ಧ್ವನಿ ಎಂದೇ ಪ್ರಸಿದ್ಧಿ ಪಡೆದಿದ್ದ ಸಿದ್ದಲಿಂಗಯ್ಯ ಸಾಮಾಜಿಕ ಸಮಾನತೆ, ಹೋರಾಟದ ಬಗ್ಗೆ ಕಾವ್ಯ, ಸಾಹಿತ್ಯಗಳ ಮೂಲಕ ಗಮನ ಸೆಳೆದಿದ್ದರು. ನಾಟಕ, ಪ್ರಬಂಧ, ವಿಮರ್ಷೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದರು.

ಸಿದ್ದಲಿಂಗಯ್ಯ ಅವರು ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದರು.  ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆಯಲ್ಲಿ 1954ರಲ್ಲಿ ಜನಿಸಿದ್ದರು.

Emergency Service

ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ಅಲ್ಲೆಕುಂತವರೆ ಸಿದ್ದಲಿಂಗಯ್ಯ ಅವರ ಪ್ರಮುಖ ಕವನ ಸಂಕಲನಗಳು. ಹಕ್ಕಿ ನೋಟ, ರಸಗಳಿಗೆಗಳು, ಎಡಬಲ, ಉರಿಕಂಡಾಯ ವಿಮರ್ಶನಾ ಕೃತಿಗಳು. ಅವತಾರಗಳು ಸದನದಲ್ಲಿ ಸಿದ್ದಲಿಂಗಯ್ಯ ಲೇಖನಗಳ ಸಂಕಲನಗಳಾಗಿದ್ದು, ಏಕಲವ್ಯ ಹಾಗೂ ನೆಲಸಮ ಪ್ರಮುಖ ನಾಟಕ ಕೃತಿಗಳಾಗಿವೆ.

ಪ್ರಶಸ್ತಿಗಳು:

* ಉತ್ತಮ ಚಲನಚಿತ್ರಗೀತ ರಚನೆಗಾಗಿ ಕರ್ನಾಟಕ ಸರ್ಕಾರ ಪ್ರಶಸ್ತಿ-1984
* ರಾಜ್ಯೋತ್ಸವ ಪ್ರಶಸ್ತಿ -ಕರ್ನಾಟಕ ಸರ್ಕಾರ-1986
* ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ -1992
* ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ -1996
* ಜಾನಪದ ತಜ್ಞ ಪ್ರಶಸ್ತಿ -2001
* ಸಂದೇಶ್ ಪ್ರಶಸ್ತಿ -2001
* ಡಾ.ಅಂಬೇಡ್ಕರ್ ಪ್ರಶಸ್ತಿ -2002
* ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ -2002
* ಬಾಬುಜಗಜೀವನರಾಮ್ ಪ್ರಶಸ್ತಿ -2005
* ನಾಡೋಜ ಪ್ರಶಸ್ತಿ -2007
* ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ -2012
* ಆಳ್ವಾಸ್ ನುಡಿಸಿರಿ ಪ್ರಶಸ್ತಿ -2012
* ನೃಪತುಂಗ ಪ್ರಶಸ್ತಿ -2018
* ಪಂಪ ಪ್ರಶಸ್ತಿ – 2019 ಗೌರವ ಪ್ರಶಸ್ತಿಗೆ ಭಾಜನರಾಗಿದ್ದರು

ಚುನಾವಣೆಗೂ ಕಾಂಗ್ರೆಸ್ ಸಿದ್ಧ…!

Bottom Add3
Bottom Ad 2