GIT add 2024-1
Laxmi Tai add
Beereshwara 33

ಸ್ಯಾಂಡಲ್ ವುಡ್ ದೂದ್ ಪೇಡಾಗೆ ಸಂಕಷ್ಟ; ವಿಚಾರಣೆಯೋ? ಬಂಧನವೋ?

ಮತ್ತೆ ಸಿಸಿಬಿ ವಿಚಾರಣೆಗೆ ಹಾಜರಾದ ನಟ ದಿಗಂತ್

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಆರೋಪ ಪ್ರಕರಣ ಸಂಬಂಧ ನಟ ದಿಗಂತ್ 2ನೇ ಬಾರಿಗೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

ಸಿಸಿಬಿ ಅಧಿಕಾರಿಗಳು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನಟನಿಗೆ ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ನಟ ದಿಗಂತ್ ಆಗಮಿಸಿದ್ದಾರೆ. ಅಧಿಕಾರಿಗಳಿಂದ ನಟನ ತೀವ್ರ ವಿಚಾರಣೆ ಆರಂಭವಾಗಿದೆ.

Emergency Service

ಸೆ.16ರಂದು ಮೊದಲ ಬಾರಿಯ ವಿಚಾರಣೆಯಲ್ಲಿ ನಟ ದಿಗಂತ್ ಹಾಗೂ ಪತ್ನಿ ಐಂದ್ರಿತಾ ತಾವು ಪಾರ್ಟಿಗಳಿಗೆ ಹೋಗುತ್ತಿದ್ದೆವು. ಆದರೆ ಡ್ರಗ್ಸ್ ಸೇವನೆ ಮಾಡುತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ ತಮಗೆ ಡ್ರಗ್ಸ್ ಪೆಡ್ಲರ್ ಗಳ ಜೊತೆ ಯಾವುದೇ ಸಂಬಂಧವಿಲ್ಲ ಎಂದಿದ್ದರು. ಆದರೆ ನಟ ದಿಗಂತ್ ಡ್ರಗ್ಸ್ ವಿಚಾರವಾಗಿ ಸುಳ್ಳು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ದಿಗಂತ್ ಹಾಗೂ ಐಂದ್ರಿತಾರಿಂದ ವಶಕ್ಕೆ ಪಡೆದುಕೊಂಡಿದ್ದ ಮೊಬೈಲ್ ನಲ್ಲಿ ಇಬ್ಬರೂ ಡ್ರಗ್ಸ್ ಜಾಲದ ಜೊತೆ ನಂಟು ಹೊಂದಿರುವ ಬಗ್ಗೆ ಹಲವು ಸಾಕ್ಷ್ಯಗಳು ಸಿಕ್ಕಿವೆ. ಅಲ್ಲದೇ ಬಂಧಿತ ಡ್ರಗ್ಸ್ ಪೆಡ್ಲರ್ ಗಳು ಕೂಡ ದಿಗಂತ್ ಬಗ್ಗೆ ಕೆಲ ಮಾಹಿತಿ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ನಟ ದಿಗಂತ್ ಅವರನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರಾ ಎಂಬುದನ್ನು ಕಾದುನೋಡಬೇಕಿದೆ.

Bottom Add3
Bottom Ad 2