P.V.Hegde Add

ಸ್ಯಾಂಡಲ್ ವುಡ್ ನಟಿಯರಿಗೆ ಮತ್ತೆ ಜೈಲೂಟವೆ ಫಿಕ್ಸ್

ಜಾಮೀನು ಅರ್ಜಿ ವಜಾಗೊಳಿಸಿದ ಎನ್ ಡಿಪಿಎಸ್ ಕೋರ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಅವರ ಜಾಮೀನು ಅರ್ಜಿಯನ್ನು ಎನ್ ಡಿಪಿಎಸ್ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿಯರಿಬ್ಬರ ಜಾಮೀನು ಅರ್ಜಿ ವಿಚಾರಣೆ ಶುಕ್ರವಾರ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದ ಮುಂದೆ ಬಂದಿತ್ತು. ಸಿಸಿಬಿ ಹಾಗೂ ನಟಿಯರ ಪರ ವಕೀಲರ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ ಇಂದಿಗೆ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ಜಾಮೀನು ಕುರಿತ ಆದೇಶ ಹೊರಡಿಸುವ ನ್ಯಾಯಾಧೀಶ ಜಿ.ಎಂ ಶೀನಪ್ಪ ರಾಗಿಣಿ ಹಾಗೂ ಸಂಜನಾ ಅವರಿಗೆ ಜಾಮೀನು ನಿರಾಕರಿಸಿದ್ದಾರೆ.

ಇಂದಾದರೂ ಜಾಮೀನು ಸಿಗಲಿದೆ ಎಂದು ನಿರೀಕ್ಷಿಸಿದ್ದ ಸ್ಯಾಂಡಲ್ ವುಡ್ ನಟಿಯರಿಗೆ ಮತ್ತೆ ನಿರಾಸೆಯಾಗಿದೆ. ಇನ್ನು ಡ್ರಗ್ಸ್ ಪ್ರಕರಣದ ಇನ್ನಿತರ ಆರೋಪಿಗಳಾದ ರಾಹುಲ್, ವಿರೇನ್ ಖನ್ನಾ, ರವಿಶಂಕರ್ ಅವರ ಜಾಮೀನು ಅರ್ಜಿ ಕುರಿತ ಆದೇಶವನ್ನು ಸೆ.30ಕ್ಕೆ ಕಾಯ್ದಿರಿಸಿದೆ.