Advertisement -Home Add
Chandargi Sports School
Wanted Home Add

ಅನ್ನಭಾಗ್ಯ ಯೋಜನೆ ಕಲ್ಪನೆ ಕೊಟ್ಟಿದ್ದೇ ನಾನು ಎಂದ ಮಾಜಿ ಸಚಿವ

ಆರೋಪಗಳಿದ್ದರೆ ದಾಖಲೆ ಕೊಡಿ, ಸುಮ್ಮನೆ ಮಾತನಾಡಬೇಡಿ ಎಂದ ವಿಶ್ವನಾಥ್

ಪ್ರಗತಿವಾಹಿನಿ ಸುದ್ದಿ; ಮೈಸೂರು: ರಾಜ್ಯದಲ್ಲಿ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ಕಲ್ಪನೆಯನ್ನು ನಿಮಗೆ ಕೊಟ್ಟಿದ್ದು ನಾನೇ. ಅದು ಕೂಡ ನಿಮ್ಮ ಸಾಧನೆಯಲ್ಲ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಸಿದ್ದರಾಮಯ್ಯ ಪ್ರಧಾನಿಯನ್ನು ಅನ್‍ಫಿಟ್ ಅಂತಾರೆ. ಹಾಗಾದರೆ ನೀವು ಸಿಎಂ ಆಗುವುದಕ್ಕೆ ಫಿಟ್ ಆಗಿದ್ರಾ..?, ಮೋದಿ ಅವರದ್ದು ಗುಜರಾತ್ ಮಾಡೆಲ್ ಇದೆ, ನಿಮ್ಮ ಮಾಡೆಲ್ ಏನಿದೆ? ಅನ್ನಭಾಗ್ಯದ ಕಲ್ಪನೆಯನ್ನು ನಿಮಗೆ ಕೊಟ್ಟಿದ್ದು ನಾನೇ ಅದು ಕೂಡ ನಿಮ್ಮ ಸಾಧನೆಯಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ಸಾಧನೆ ಏನು, ಮೋದಿ ಸಾಧನೆ ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಪ್ರಧಾನಿ ವಿರುದ್ಧ ದಾಖಲೆ ಇದ್ದರೆ ಬಿಡುಗಡೆ ಮಾಡಿ. ಹಿಟ್ ಅಂಡ್ ರನ್ ಮಾಡಬೇಡಿ. ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಆರೋಪ ಇದ್ದರೆ ದಾಖಲೆ ಕೊಡಿ. ಸುಮ್ಮನೆ ಮಾತಾಡಬೇಡಿ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.

ರಾಹುಲ್ ಗಾಂಧಿ ಈ ಪ್ರಧಾನಿಗೂ ಗೌರವ ಕೊಡಲ್ಲ. ಕಾಂಗ್ರೆಸ್ಸಿನಲ್ಲಿಯೇ ಪ್ರಧಾನಿಯಾದವರಿಗೂ ಗೌರವ ಕೊಟ್ಟಿಲ್ಲ. ನೀವು ಗೌರವ ಕೊಡುವುದನ್ನೇ ಕಲಿತಿಲ್ಲ ಎಂದರು.