Athani Takkennavar
Beereshwara13
GIT add4

ಹಿಜಾಬ್ ಪ್ರಕರಣ ; ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಮುಕ್ತಾಯ

ತೀರ್ಪು ಕಾಯ್ದಿರಿಸಿದ ಸರ್ವೋಚ್ಛ ನ್ಯಾಯಾಲಯ

KLE1099 Add

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣದ ಕುರಿತ ಅರ್ಜಿ ವಿಚಾರಣೆ ಅಂತ್ಯಗೊಂಡಿದ್ದು, ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ವಿವಾದ ತೀವ್ರ ಸಂಘರ್ಷಕ್ಕೆ ಕಾರಣವಾಗಿತ್ತು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿತ್ತು. 10 ದಿನಗಳ ಕಾಲ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ಜಸ್ಟೀಸ್ಟ್ ಹೇಮಂತ್ ಗುಪ್ತಾ ನೇತೃತ್ವದ ಪೀಠ ವಾದ-ಪ್ರತಿವಾದಗಳನ್ನು ಆಲಿಸಿದ್ದು, ಇಂದು ತೀರ್ಪು ಕಾಯ್ದಿರಿಸಿದೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಅಥವಾ ಯಾವುದೇ ಧಾರ್ಮಿಕ ಚಿಹ್ನೆಗಳನ್ನು ಧರಿಸಿ ತರಗತಿಗಳಿಗೆ ಬರುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿತ್ತು.
ಪರಿಷತ್ ನಲ್ಲಿ ಪೇಸಿಎಂ ಪ್ರತಿಧ್ವನಿ; ಕಾಂಗ್ರೆಸ್ ಪೋಸ್ಟರ್ ಧರಣಿಗೆ ಪ್ರತಿಯಾಗಿ ಬಿಜೆಪಿಯಿಂದ ಪ್ರತಿಭಟನೆ; ಸಭಾಪತಿ ಪೀಠಕ್ಕೆ ಮುತ್ತಿಗೆ ಹಾಕಿ ‘ಕೈ’ ನಾಯಕರ ಆಕ್ರೋಶ

ಪರಿಷತ್ ನಲ್ಲಿ ಪೇಸಿಎಂ ಪ್ರತಿಧ್ವನಿ; ಕಾಂಗ್ರೆಸ್ ಪೋಸ್ಟರ್ ಧರಣಿಗೆ ಪ್ರತಿಯಾಗಿ ಬಿಜೆಪಿಯಿಂದ ಪ್ರತಿಭಟನೆ; ಸಭಾಪತಿ ಪೀಠಕ್ಕೆ ಮುತ್ತಿಗೆ ಹಾಕಿ ‘ಕೈ’ ನಾಯಕರ ಆಕ್ರೋಶ

Nivedita Navalgund
You cannot copy content of this page