Advertisement -Home Add

ಸಿದ್ದರಾಮಯ್ಯ ತಮ್ಮ ವ್ಯಕ್ತಿತ್ವ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದ ಸಚಿವರು

ಶಾಸಕ ಜಮೀರ್ ತಪ್ಪು ಸಮರ್ಥನೆಗೆ ಕಿಡಿ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಶಾಸಕ ಜಮೀರ್ ಅಹ್ಮದ್ ಕ್ಯಾಸಿನೋ ಗೆ ಹೋಗಿದ್ದು ತಪ್ಪಲ್ಲ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ವ್ಯಕ್ತಿತ್ವವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಜಮೀರ್ ಅಹ್ಮದ್ ಅವರ ತಪ್ಪನ್ನು ಸಮರ್ಥಿಸಿಕೊಂಡಿರುವುದು ಸರಿಯಲ್ಲ ಎಂದರು. ಕಾಂಗ್ರೆಸ್ ಸರ್ಕಾರ, ಮೈತ್ರಿ ಸರ್ಕಾರ ಇದ್ದಾಗ ಡ್ರಗ್ಸ್ ಮಾಫಿಯಾ ಹೊರ ಬರಲಿಲ್ಲ. ಹಿಂದಿನ ಸರ್ಕಾರ ಅದಕ್ಕೆಲ್ಲ ರಕ್ಷಣೆ ಕೊಟ್ಟಿತ್ತು. ಆದರೆ ನಮ್ಮ ಸರ್ಕಾರ ಬಂದ ಮೇಲೆ ಎಲ್ಲವೂ ಹೊರಬರುತ್ತಿದೆ. ಬಹಳ ಜನ ಇದರಲ್ಲಿ ಭಾಗಿಯಾಗಿದ್ದು, ಎಲ್ಲರೂ ಹೊರ ಬರುತ್ತಾರೆ ಎಂದು ಹೇಳಿದರು.

ಯಾರೂ ತಪ್ಪು ಮಾಡಿಲ್ಲವೋ ಅವರು ತನಿಖೆಗೆ ಹೆದರುವ ಪ್ರಶ್ನೆಯೇ ಇಲ್ಲ. ಜಮೀರ್ ತಪ್ಪು ಮಾಡಿಲ್ಲ ಅಂತಂದ್ರೆ ಯಾಕೆ ಹೆದರಬೇಕು ಎಂದು ಪ್ರಶ್ನಿಸಿದರು.