Advertisement -Home Add

ಸರಕಾರದ ಅಕ್ರಮ ಬಯಲು ಮಾಡಿದ್ದಕ್ಕೆ ನಮಗೇ ನೋಟೀಸ್ – ಡಿಕೆಶಿ ಆಕ್ರೋಶ

ಕಲಬುರ್ಗಿಯಲ್ಲಿ ಮುಗಿಬಿದ್ದು ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಕೊವಿಡ್ ಸಲಕರಣೆ ಖರೀದಿಯಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ಇದನ್ನು ಬಯಲಿಗೆಳೆದಿದ್ದಕ್ಕೆ ನಮಗೇ ನೋಟೀಸ್ ನೀಡಿದ್ದಾರೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಕಲಬುರ್ಗಿಗೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್, 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಸರ್ಕಾರ ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ ಎಂದು ವಾಗ್ದಾಳಿ ನಡೆಸಿದರು.

ಡಿ.ಕೆ ಶಿವಕುಮಾರ್  ಕಲಬುರ್ಗಿಗೆ ತೆರಳಿದ್ದಲ್ಲದೇ ಗಾಣಗಾಪುರ ದತ್ತಾತ್ರಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಸಾಮಾಜಿಕ ಅಂತರ, ಮಾಸ್ಕ್ ಮರೆತು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಡಿ.ಕೆ ಶಿವಕುಮಾರ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ.