Advertisement -Home Add
Chandargi Sports School
Wanted Home Add

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕಾರ

ಮೂವರು ಕಾರ್ಯಾದ್ಯಕ್ಷರ ಪದಗ್ರಹಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಬಾವುಟ ನೀಡುವ ಮೂಲಕ ಅಧಿಕೃತವಾಗಿ ಅಧಿಕಾರ ಹಸ್ತಾಂತರ ಮಾಡಿದರು. ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಲೀಂ ಅಹ್ಮದ್​, ಈಶ್ವರ ಖಂಡ್ರೆ, ಸತೀಶ್​ ಜಾರಕಿಹೊಳಿ ಅಧಿಕಾರ ಸ್ವೀಕಾರ ಮಾಡಿದರು.

ಇನ್ನು ಪದಗ್ರಹಣ ಕಾರ್ಯಕ್ರಮವನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗಿದ್ದು, ಸಮಾರಂಭ ರಾಜ್ಯದ 7,800 ಗ್ರಾಮ ಪಂಚಾಯ್ತಿಗಳಲ್ಲಿ ನೇರಪ್ರಸಾರ ಮಾಡಲಾಯಿತು. ಕೆಪಿಸಿಸಿ ಕಚೇರಿಯಲ್ಲಿ 50 ಗಣ್ಯರಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯದ ವಿವಿಧ ಭಾಗಗಳಿಂದ 10 ಲಕ್ಷಕ್ಕೂ ಅಧಿಕ ಜನ ಏಕಕಾಲದಲ್ಲಿ ಪದಗ್ರಹಣ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ ಪರಮೇಶ್ವರ್, ಹೆಚ್ ಕೆ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.