Advertisement -Home Add
Crease wise (28th Jan)
KLE1099 Add

ಕೊರೊನಾ ತಡೆಗೆ ಲಾಕ್ ಡೌನ್ ಕ್ರಮ ಅನುಸರಿಸಿ ಎಂದ ಸುಪ್ರೀಂ

2 ವಾರದಲ್ಲಿ ರಾಷ್ಟ್ರೀಯ ನೀತಿ ಜಾರಿಗೆ ಸೂಚನೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ 2ಲೇ ಅಲೆ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ ಡೌನ್ ಕ್ರಮ ಪರಿಗಣಿಸಿ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಸರ್ಕಾರಗಳು ಕಠಿಣ ನಿಯಮ ಜಾರಿ ಮಾಡಬೇಕು. ಲಾಕ್ ಡೌನ್ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆಯೂ ನಮಗೆ ಅರಿವಿದೆ. ಇದರಿಂದ ಬಡವರ ಮೇಲೆ ಆಗುವ ಪರಿಣಾಮದ ಬಗ್ಗೆಯೂ ಸರ್ಕಾರ ಯೋಚಿಸಬೇಕು. ಆದರೆ ಸಮುದಾಯದ ಹಿತ ಕಾಪಾಡುವ ನಿಟ್ಟಿನಲ್ಲಿ ಲಾಕ್ ಡೌನ್ ಕ್ರಮ ಅನುಸರಿಸುವುದು ಉತ್ತಮ ಎಂದಿದೆ.

ಆಸ್ಪತ್ರೆಗಳಿಗೆ ಸೋಂಕಿತರನ್ನು ದಾಖಲು ಮಾಡಿಕೊಳ್ಳುವ ಬಗ್ಗೆ ಕೇಂದ್ರ ಸರ್ಕಾರ 2 ವಾರಗಳ ಒಳಗೆ ರಾಷ್ಟ್ರೀಯ ನೀತಿಯೊಂದನ್ನು ರೂಪಿಸಬೇಕು. ಇದನ್ನು ಎಲ್ಲಾ ಸರ್ಕಾರಗಳು ಪಾಲಿಸಬೇಕು ಎಂದು ಹೇಳುವ ಮೂಲಕ ಸರ್ಕಾರಗಳಿಗೆ ಕೆಲ ನಿರ್ದೇಶನಗಳನ್ನು ಸುಪ್ರೀಂಕೋರ್ಟ್ ನೀಡಿದೆ.
ರಾಜ್ಯದಲ್ಲಿ ಭೀಕರ ದುರಂತ; ಆಕ್ಸಿಜನ್ ಕೊರತೆಯಿಂದ 22 ರೋಗಿಗಳು ಸಾವು