KLE1099 Add

ಲಾಕ್ ಡೌನ್ : ಸಚಿವ ಸುಧಾಕರ್ ಖಡಕ್ ಎಚ್ಚರಿಕೆ

ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ

Beereshwara 6

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಒಮಿಕ್ರಾನ್ ಭೀತಿ ಹಾಗೂ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಲಿದೆ ಎಂಬ ಸುದ್ದಿ ಹರಡಿತ್ತು ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಸುಧಾಕರ್, ಲಾಕ್ ಡೌನ್ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಲಾಕ್ ಡೌನ್ ಬಗ್ಗೆ ಸುಳ್ಳು ವದಂತಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಗಾಲೇ ಜನರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ, ಹಲವರು ಉದ್ಯೋಗಗಳನ್ನು ಕಲೆದುಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಲಾಕ್ ಡೌನ್ ನಂಥ ಕ್ರಮದ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದರು.

ಸಾಮಾಜಿಕ ಜಾಲತಾಣವನ್ನು ಒಳ್ಳೆಯ, ಖಚಿತ ಮಾಹಿತಿಯನ್ನೊಳಗೊಂಡ ಸುದ್ದಿಗಳನ್ನು ವೇಗವಾಗಿ ಜನರಿಗೆ ತಲುಪಿಸಲು ಬಳಸಬೇಕು ಹೊರತು ಗೊಂದಲಮಯ ಸುದ್ದಿಗಳನ್ನು, ಜನರಲ್ಲಿ ಭೀತಿ ಹೆಚ್ಚಿಸುವ ಸುದ್ದಿಗಳನ್ನು ಹರಡಲು ಬಿಡಬೇಡಿ ಎಂದು ಮನವಿ ಮಾಡಿದರು.

ಒಮಿಕ್ರಾನ್ ವೈರಸ್ ಬಗ್ಗೆ ಮಾತನಾಡಿದ ಸಚಿವರು, ಒಮಿಕ್ರಾನ್, ಜಿನೋಮಿಕ್ಸ್ ಸೀಕ್ವೆನ್ಸ್ ಪತ್ತೆಯಾದ ಮೇಲೆ ಸರಿಯಾದ ಮಾಹಿತಿ ಸಿಗುತ್ತದೆ. 12 ದೇಶಗಳಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಕಳೆದ 12 ದಿನಗಳಲ್ಲಿ ಆಫ್ರಿಕನ್ ದೇಶಗಳಿಂದ ರಾಜ್ಯಕ್ಕೆ ಬಂದವರ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಒಮಿಕ್ರಾನ್ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಆದ್ರೆ ಗಂಭೀರ ಪರಿಣಾಮಬೀರಲ್ಲ ಎನ್ನಲಾಗಿದೆ ಎಂದರು.

ಭೀಕರ ಅಪಘಾತ; ಶಾಸಕರ ಅಳಿಯ ಸೇರಿ ನಾಲ್ವರ ದುರ್ಮರಣ

You cannot copy content of this page