Advertisement -Home Add

ಸಚಿವೆ ಶಶಿಕಲಾ ಜೊಲ್ಲೆ ಹುಟ್ಟುಹಬ್ಬ; ವಿವಿಧ ಕಾರ್ಯಕ್ರಮಗಳ ಮೂಲಕ ಸಂಭ್ರಮ

ಸಸಿ ನೆಟ್ಟು, ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಪ್ರಗತಿವಾಹಿನಿ ಸುದ್ದಿ; ನಿಪ್ಪಾಣಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ 51ನೇ ಹುಟ್ಟುಹಬ್ಬದ ಅಂಗವಾಗಿ ತಾಲೂಕಿನ ವಿವಿಧೆಡೆಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ನಗರದಲ್ಲಿ ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಚೇರಮನ್ ಚಂದ್ರಕಾಂತ್ ಕೊಠಿವಾಲೆ ಅಧ್ಯಕ್ಷತೆಯಲ್ಲಿ ಸ್ವಚ್ಚತಾ ಅಭಿಯಾನ, ಸಸಿ ನೆಡುವ ಕಾರ್ಯಕ್ರಮ ಹಾಗೂ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು.

ರೇಣುಕಾ ಮಂದಿರದ ಹತ್ತಿರವಿರುವ ಶಿವಾಜಿ ಉದ್ಯಾನವನದಲ್ಲಿ ಬೆಳಿಗ್ಗೆ ನಗರಸಭೆ ಅಧ್ಯಕ್ಷ ಜಯಂತ ಭಾಟಲೆ, ಉಪಾಧ್ಯಕ್ಷೆ ನೀತಾ ಬಾಗಡಿ, ಸದಸ್ಯರು, ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು ಪರಿಸರವನ್ನು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ಹಾಲಶುಗರ್ ಚೇರಮನ್ ಚಂದ್ರಕಾಂತ ಕೋಠಿವಾಲೆ ಸಸಿಗೆ ನೀರುಣಿಸುವ ಮೂಲಕ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲು, ಬಿಸ್ಕೇಟ್ ಗಳನ್ನು ವಿತರಿಸಲಾಯಿತು. ಯುವವರ್ಗವು ಸಚಿವೆ ಜೊಲ್ಲೆಯವರಿಗೆ ಘೋಷಣೆಗಳನ್ನು ಕೂಗಿ ಜೈಕಾರ ಹಾಕಿ ಹುಟ್ಟುಹಬ್ಬದ ಶುಭಾಷಯಗಳನ್ನು ತಿಳಿಸಿದರು.

ರಾಜು ಗುಂಡೇಶಾ, ದೀಪಕ ಪಾಟೀಲ, ಸೋನಾಲಿ ಉಪಾಧ್ಯೆ, ತಾತ್ಯಾಸಾಹೇಬ ನಾಯಿಕ, ಪಕ್ಷದ ನಗರ ಘಟಕ ಅಧ್ಯಕ್ಷ ಪ್ರಣವ ಮಾನವಿ, ಮಹಿಳಾ ಮೋರ್ಚಾ ಸ್ಥಳೀಯ ಘಟಕದ ಅಧ್ಯಕ್ಷೆ ವಿಭಾವರಿ ಖಾಂಡಕೆ ಮೊದಲಾದವರು ಉಪಶಿತರಿದ್ದರು.