Athani Takkennavar
Beereshwara13
GIT add4

ಮುರುಘಾಶ್ರೀ ಜಾಮೀನು ತಿರಸ್ಕೃತ; ಮತ್ತೆ ಜೈಲೇ ಗತಿ

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಮತ್ತೆ ಚಿತ್ರದುರ್ಗ ಜೈಲಿಗೆ ಶಿಫ್ಟ್

KLE1099 Add

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಸ್ವಾಮೀಜಿಗಳಿಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳು ಜಾಮೀನು ಕೋರಿ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ.ಬಿ.ಕೆ.ಕೋಮಲಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.

ಮುರುಘಾಶ್ರೀಗಳಿಗೆ ಸೆ.27ರವರೆಗೆ ಜೈಲುವಾಸವೇ ಗತಿಯಾಗಿದೆ. ಈ ನಡುವೆ ಮುರುಘಾಶ್ರೀಗಳಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ನಿನ್ನೆ ಆಂಜಿಯೋಗ್ರಾಂ ಪರೀಕ್ಷೆ ಮಾಡಲಾಗಿತ್ತು. ಈ ವೇಳೆ ಶ್ರೀಗಳಿಗೆ ಯಾವುದೇ ಅನಾರೋಗ್ಯವಿಲ್ಲ ಅವರ ಆರೋಗ್ಯ ಸ್ಥಿತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಯಿಂದ ಪೊಲೀಸ್ ವಾಹನದಲ್ಲಿ ಮತ್ತೆ ಚಿತ್ರದುರ್ಗ ಸೆಂಟ್ರಲ್ ಜೈಲಿಗೆ ಶ್ರೀಗಳನ್ನು ಸ್ಥಳಾಂತರಿಸಲಾಗಿದೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪೊಲೀಸ್ ವಶಕ್ಕೆ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪೊಲೀಸ್ ವಶಕ್ಕೆ

Nivedita Navalgund
You cannot copy content of this page