Advertisement -Home Add
Crease wise (28th Jan)
KLE1099 Add

ಇಬ್ಬರು ಮಕ್ಕಳು ಸೇರಿದಂತೆ ನಾಲ್ವರನ್ನು ಕೊಚ್ಚಿ ಕೊಲೆಗೈದ ವ್ಯಕ್ತಿ

ಮೈಸೂರಿನಲ್ಲಿ ಹೃದಯವಿದ್ರಾವಕ ಘಟನೆ

ಪ್ರಗತಿವಾಹಿನಿ ಸುದ್ದಿ; ಮೈಸೂರು: ವ್ಯಕ್ತಿಯೋರ್ವ ತನ್ನ ತಾಯಿ, ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಸ್ವಾಮಿನಹುಂಡಿ ಗ್ರಾಮದಲ್ಲಿ ಮಣಿಕಂಠ ಎಂಬಾತ ತನ್ನಿಬ್ಬರು ಮಕ್ಕಳಾದ 1 ವರ್ಷದ ರೋಹಿತ್, 2 ವರ್ಷದ ಸಾಮ್ರಾಟ್ ಹಾಗೂ ಪತ್ನಿ ಗಂಗಾ, ತಾಯಿ ಕೆಂಪಮ್ಮರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಸರಗೂರು ಠಾಣೆ ಪೊಲಿಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.