Athani Takkennavar
Beereshwara13
GIT add4

ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿ PayCM ಪೋಸ್ಟರ್ ಅಂಟಿಸಲು ಮುಂದಾದ ಕಾಂಗ್ರೆಸ್; ಪೊಲೀಸರ ಮನವೊಲಿಕೆಗೂ ಬಗ್ಗದ ಕೈ ನಾಯಕರು

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಖಚಿತ ಎಂದ ಡಿಕೆಶಿ

KLE1099 Add

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿ ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದು, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕೈ ನಾಯಕರ ಹೋರಾಟ ತಾರಕ್ಕೇರಿದೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪೇಸಿಎಂ ಆಂದೋಲನದಲ್ಲಿ ಕಾಂಗ್ರೆಸ್ ಶಾಕರೆಲ್ಲರೂ ಭಾಗಿಯಾಗಬೇಕು. ಬೆಂಗಳೂರಿನ ಗಲ್ಲಿ ಗಲ್ಲಿಗಳಲಿ ಗೋಡೆಗಳ ಮೇಲೆ ಪೇಸಿಎಂ ಪೋಸ್ಟರ್ ಅಂಟಿಸಬೇಕು ಎಂದು ಕರೆ ನೀಡಿದ್ದಾರೆ.

ಈ ಅಭಿಯಾನದಲ್ಲಿ ಸ್ವತ: ನಾನು, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಸಲಿಂ ಅಹ್ಮದ್, ಸೇರಿದಂತೆ ಎಲ್ಲಾ ನಾಯಕರು ಭಾಗಿಯಾಗುತ್ತೇವೆ. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಕೆಪಿಸಿಸಿ ಕಚೇರಿಯಿಂದ ಕಾಂಗ್ರೆಸ್ ನಾಯಕರು ಪೇಸಿಎಂ ಪೋಸ್ಟರ್ ಅಭಿಯಾನಕ್ಕೆ ತೆರಳುವ ಸಜ್ಜಾಗುತ್ತಿದ್ದಂತೆ ಅಲರ್ಟ್ ಆಗಿರುವ ಪೊಲೀಸರು, ಒಂದೆಡೆ ಕಾಂಗ್ರೆಸ್ ನಾಯಕರ ಮನವೊಲಿಕೆ ಯತ್ನ ನಡೆಸಿದ್ದಾರೆ. ಪೇಸಿಎಂ ಅಭಿಯಾನ ಕೈಬಿಡುವಂತೆ ಒತ್ತಾಯಿಯಿಸಿದ್ದಾರೆ. 20 ನಿಮಿಷಗಳ ಕಾಲ ಮಾತುಕತೆ ನಡೆಸಿದರೂ ಬಗ್ಗದ ಕಾಂಗ್ರೆಸ್ ನಾಯಕರು ನಮ್ಮ ಹೋರಾಟ ನಿಶ್ಚಿತ ಎಂದಿದ್ದಾರೆ.

ಕಾಂಗ್ರೆಸ್ ಅಭಿಯಾನ ತಡೆಯಲು ಪೊಲಿಸರು ಸಜ್ಜಾಗಿದ್ದು, ಕೆಪಿಸಿಸಿ ಕಚೇರಿ ಬಳಿ, ಸಿಎಂಗೃಹ ಕಚೇರಿ, ಸಿಎಂ ನಿವಾಸ ಹಾಗೂ ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಪೊಲಿಸರು ನಿಯೋಜನೆಗೊಂದಿದ್ದು, ಕಾಂಗ್ರೆಸ್ ನಾಯಕರನ್ನು ತಡೆಯಲು ಸಿದ್ಧತೆ ನಡೆಸಿದ್ದಾರೆ.
ಯಾವ ಕ್ಯಾಂಪೇನ್ ಬೇಕಾದ್ರೂ ಮಾಡಲಿ; ಕಾಂಗ್ರೆಸ್ ನಾಯಕರಿಗೆ ಕೌಂಟರ್ ಕೊಟ್ಟ ಸಿಎಂ

ಯಾವ ಕ್ಯಾಂಪೇನ್ ಬೇಕಾದ್ರೂ ಮಾಡಲಿ; ಕಾಂಗ್ರೆಸ್ ನಾಯಕರಿಗೆ ಕೌಂಟರ್ ಕೊಟ್ಟ ಸಿಎಂ

Nivedita Navalgund
You cannot copy content of this page