Athani Takkennavar
Beereshwara13
GIT add4

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರಿನ ಗೋಡೆಗಳ ಮೇಲೆ ಪೇಸಿಎಂ ಪೋಸ್ಟರ್

KLE1099 Add

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಸರ್ಕಾರದ 40% ಕಮಿಷನ್ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಪೇಸಿಎಂ ಪೋಸ್ಟರ್ ಅಭಿಯಾನ ತೀವ್ರಗೊಳಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಕ್ಕ ಸಿಕ್ಕ ಕಡೆಗಳಲ್ಲಿ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಿಂದ ಪೇಸಿಎಂ ಪೋಸ್ಟರ್ ಹಿಡಿದು ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಎಂ.ಬಿ.ಪಾಟೀಲ್, ರಿಜ್ವಾನ್ ಅರ್ಷದ್ ಸೇರಿದಂತೆ ಪ್ರಮುಖ ನಾಯಕರು ನೂರಾರು ಕಾಂಗ್ರೆಸ್ ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆಗೆ ಆಗಮಿಸಿ ಗೋಡೆ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಿದ್ದಾರೆ.

ವೋಲ್ವೋ ಬಿಲ್ಡಿಂಗ್ ಗೋಡೆ, ಬಿಟಿಸಿ ಕಾಂಪೌಂಡ್, ಬಿಎಂಟಿಸಿ ಬಸ್, ಆಟೋಗಳ ಮೇಲೆ ಪೇಸಿಎಂ ಪೋಸ್ಟರ್ ಅಂಟಿಸಿ ಭ್ರಷ್ಟ ಬಿಜೆಪಿ ಸರ್ಕಾರಕ್ಕೆ, 40% ಕಮಿಷನ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವತ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಣದೀಪ್ ಸುರ್ಜೇವಾಲಾ ಸೇರಿದಂತೆ ಪ್ರಮುಖ ನಾಯಕರು ಪೇಸಿಎಂ ಪೋಸ್ಟರ್ ಅಂಟಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರ ಪೊಲೀಸರನ್ನು ಬಿಜೆಪಿ ಕಾರ್ಯಕರ್ತರಂತೆ ಬಳಸಿಕೊಳ್ಳುತ್ತಿದೆ ಎಂದು ಗುಡುಗಿದ್ದಾರೆ.

ಈ ವೇಳೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಕಾಂಗ್ರೆಸ್ ನಾಯಕರನ್ನು ತಡೆದಿದ್ದು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿ PayCM ಪೋಸ್ಟರ್ ಅಂಟಿಸಲು ಮುಂದಾದ ಕಾಂಗ್ರೆಸ್; ಪೊಲೀಸರ ಮನವೊಲಿಕೆಗೂ ಬಗ್ಗದ ಕೈ ನಾಯಕರು

ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿ PayCM ಪೋಸ್ಟರ್ ಅಂಟಿಸಲು ಮುಂದಾದ ಕಾಂಗ್ರೆಸ್; ಪೊಲೀಸರ ಮನವೊಲಿಕೆಗೂ ಬಗ್ಗದ ಕೈ ನಾಯಕರು

Nivedita Navalgund
You cannot copy content of this page