Yoga add Final 1
KLE1099 Add

ಬೊಮ್ಮಾಯಿ ಸೇರಿ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

ಕೋವಿಡ್ ಕೇಸ್ ಹೆಚ್ಚಳ; ಎಲ್ಲಾ ರಾಜ್ಯಗಳ ಸಿಎಂ ಜತೆ ಪ್ರಧಾನಿ ಸಭೆ

GIT Add 3
Beereshwara add 12

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ ಒಮಿಕ್ರಾನ್ ಕೇಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯುತ್ತಿದೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಮೋದಿ ಸಭೆ ಮುಕ್ತಾಯಗೊಂಡಿದ್ದು, ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ, ಲಸಿಕೆ ಅಭಿಯಾದದ ಬಗ್ಗೆ ಮಾಹಿತಿ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಅದರಲ್ಲಿಯೂ ಮುಖ್ಯವಾಗಿ ಬೆಂಗಳೂರಿನಲ್ಲಿ ಕೋವಿಡ್ ಕೇಸ್ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳಬಗ್ಗೆಯೂ ಸಿಎಂ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ, ಟೆಸ್ಟಿಂಗ್ ಹೆಚ್ಚಳ, ಬೂಸ್ಟರ್ ಡೋಸ್, ವ್ಯಾಕ್ಸಿನೇಷನ್, ಮಕ್ಕಳಿಗಾಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್, ಬೆಡ್ ವ್ಯವಸ್ಥೆ ಸೇರಿದಂತೆ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡಿರುವ ಮುಂಜಾಗೃತಾ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಯವರಿಗೆ ಮುಖ್ಯಮಂತ್ರಿಗಳು ವಿವರಿಸಿದ್ದಾರೆ.

ದೇಶದ ವಿವಿಧ ರಾಜ್ಯಗಳಲ್ಲಿನ‌ ಕೋವಿಡ್ ಸ್ಥಿತಿಗತಿ ಕುರಿತಾಗಿಯೂ ಪ್ರಧಾನಿ ಮೋದಿ ರಾಜ್ಯಗಳ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ಅಂತಿಮವಾಗಿ ಪ್ರಧಾನಿಗಳು ಯಾವ ಘೋಷಣೆ ಮಾಡಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಬೆಳಗಾವಿ ಖಾಸಗಿ ಕಾಲೇಜಿನ 18 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

Home add- Bottom