GIT add 2024-1
Laxmi Tai add
Beereshwara 33

ಕೊರೊನಾ ವಿರುದ್ಧ ಜನಾಂದೋಲನಕ್ಕೆ ಪ್ರಧಾನಿ ಮೋದಿ ಚಾಲನೆ

ಕೊವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಸಾಮಾಜಿಕ ಜವಾಬ್ದಾರಿ ನಿರ್ವಹಣೆಗೆ ಕರೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಜಲಾಂದೋಲನ ಅಭಿಯಾನಕ್ಕೆ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣದಲ್ಲಿ ಚಾಲನೆ ನೀಡಿದ್ದಾರೆ.

Emergency Service

ಕೊವಿಡ್ ವಾರಿಯರ್ ಗಳಿಂದ ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ಸಿಕ್ಕಿದೆ. ಸೋಂಕಿನಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಇನ್ನಷ್ಟು ದಿನಗಳ ಕಾಲ ಈ ಹೋರಾಟ ಮುಂದುವರಿಸಬೇಕಿದೆ. ಈ ಅಭಿಯಾನದ ಮೂಲಕ ಸಾಮಾಜಿಕ ಜವಾಬ್ದಾರಿ ನಿರ್ವಹಿಸಿ, ಕೊರೊನಾ ವಾರಿಯರ್ ಗೆ ನೈತಿಕ ಬೆಂಬಲ ನೀಡುವ ಮೂಲಕ ಕೊವಿಡ್-19 ವಿರುದ್ಧ ಹೋರಾಡೋಣ ತೀವ್ರಗೊಳಿಸೋಣ ಎಂದು ಕರೆ ನೀಡಿದ್ದಾರೆ.

ಕೊವಿಡ್ ನಂತಹ ಈ ಸಂಕಷ್ಟದ ಸಂದರ್ಭದಲ್ಲಿ ಬದುಕು ಕಟ್ಟಿಕೊಳ್ಳಬೇಕಾದ ಅನಿವಾರ್ಯತೆಯಿದೆ. ಆರ್ಥಿಕತೆಗೆ ಪುನಶ್ಚೇತನ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜನರು ಸಾಧ್ಯವಾದಷ್ಟು ತಮ್ಮ ಸುರಕ್ಷತೆ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕೈ ತೊಳೆಯುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ.

Bottom Add3
Bottom Ad 2