Advertisement -Home Add

ರಾಮ ಎಲ್ಲೆಲ್ಲೂ ಇದ್ದಾನೆ, ಎಲ್ಲರೊಂದಿಗೂ ಇದ್ದಾನೆ

ರಾಮ ಮಂದಿರ ಶಿಲನ್ಯಾಸ ಸಿದ್ಧತೆ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಟ್ವೀಟ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಶಿಲನ್ಯಾಸಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಮ ಜನ್ಮ ಭೂಮಿಯಲ್ಲಿ ಮಂದಿರ ನಿರ್ಮಾಣದ ಭೂಮಿ ಪೂಜೆಗಾಗಿ ಸಕಲ ಸಿದ್ಧತೆಗಳು ನಡೆದಿವೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದು, ರಾಮ ಎಲ್ಲಕಡೆಯಲ್ಲೂ ಇದ್ದಾನೆ. ರಾಮ ಎಲ್ಲರೊಂದಿಗೂ ಇದ್ದಾನೆ ಎಂದು ಹೇಳುವ ಮೂಲಕ ಗಮನ ಸೆಳೆದಿದ್ದಾರೆ.

ಶ್ರೀರಾಮ ಸರಳತೆ, ಸಾಹಸ, ಸಂಯಮ, ತ್ಯಾಗ, ವಚನಬದ್ಧತೆ, ದೀನಬಂಧುವಾಗಿದ್ದಾನೆ. ರಾಮ ಎಲ್ಲೆಲ್ಲೂ ಇದ್ದಾನೆ, ಎಲ್ಲರೊಂದಿಗೂ ಇದ್ದಾನೆ ಎಂದು ಹೇಳಿದ್ದಾರೆ.

ಭಗವಾನ್ ರಾಮ ಹಾಗೂ ಸೀತಾ ಮಾತೆಯ ಸಂದೇಶ ಹಾಗೂ ಕೃಪೆಯೊಂದಿಗೆ ರಾಮಲಲ್ಲಾದಲ್ಲಿ ನಡೆಯುತ್ತಿರುವ ಭೂಮಿ ಪೂಜೆ ರಾಷ್ಟ್ರೀಯ ಏಕತೆ, ಬಂಧುತ್ವ ಹಾಗೂ ಸಂಸ್ಕೃತಿಕ ಸಮಾಗಮದ ಅವಕಾಶವಾಗಲಿ ಎಂದಿದ್ದಾರೆ.

ಹಿಂದಿಯಲ್ಲಿ ಬರೆದಿರುವ ಕಾಂಗ್ರೆಸ್ ಪಕ್ಷದ ಚಿನ್ಹೆ ಇರುವ ಪತ್ರವನ್ನು ಟ್ವೀಟ್ ಮಾಡಿದ್ದು, ಜೈ ಶ್ರೀರಾಮ್‌ ಎಂದು ಬರೆದಿದ್ದಾರೆ.