Advertisement

ಕ್ವಾರಂಟೈನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

ರಾಯಚೂರಿನಲ್ಲಿ 49 ಜನರ ವಿರುದ್ಧ ದಾಖಲಾಯ್ತು ಕೇಸ್

ಪ್ರಗತಿವಾಹಿನಿ ಸುದ್ದಿ; ರಾಯಚೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದಿರೂ ಜನರು ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಈ ನಡುವೆ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 49 ಜನರ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

5,249 ಮಂದಿಗೆ ಪೊಲೀಸ್ ಇಲಾಖೆಯಿಂದ ನೋಟಿಸ್ ಕಳುಹಿಸಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕಂಟ್ರೋಲ್ ರೂಮಿನಿಂದ 990 ಜನರಿಗೆ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ. ಹೊರರಾಜ್ಯದಿಂದ ಬಂದವರು, ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಅವರಿಗೆ ಕ್ವಾರಂಟೈನ್ ವಾಚ್ ಆ್ಯಪ್ ಅಪ್‍ಲೋಡ್ ಮಾಡಲಾಗುತ್ತದೆ.

ಜಿಯೋಫೆನ್ಸಿಂಗ್ ಬ್ರಿಚಿಂಗ್ ನಲ್ಲಿ ನಿಯಮ ಉಲ್ಲಂಘಿಸಿದರೆ ಮಾಹಿತಿ ಸಿಗುತ್ತದೆ. ಈ ಮಾಹಿತಿ ಆಧರಿಸಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ 3764 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.