Advertisement -Home Add

ಸಂಸದ ಅಮರ್ ಸಿಂಗ್ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಅಮರ್ ಸಿಂಗ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯಸಭಾ ಸದಸ್ಯ, ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

ಅಮರ್ ಸಿಂಗ್ ಅವರನ್ನು ಕಳೆದ 7 ತಿಂಗಳ ಹಿಂದೆ ಸಿಂಗಾಪೂರ್​ನ ಮೌಂಟ್​ ಎಲಿಜಿಬೆತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಕೆಲ ವರ್ಷಗಳಿಂದ ಕಿಡ್ನಿವೈಫಲ್ಯ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದಾಗಿ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

2010ರ ಜವರಿ ತಿಂಗಳಲ್ಲಿ ಅಮರ್ ಸಿಂಗ್ ಅವರು ಸಮಾಜವಾದಿ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಬಳಿಕ 2016ರಲ್ಲಿ ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು.