Advertisement -Home Add

ಡ್ರಗ್ಸ್ ಕೇಸ್ ನಲ್ಲಿ ಒಳಗೆ ಹೋಗ್ತಾರಾ ಸ್ಟಾರ್ ದಂಪತಿ…?

ಸಿಸಿಬಿ ವಿಚಾರಣೆಗೆ ಹಾಜರಾದ ದಿಗಂತ್-ಐಂದ್ರಿತಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನ ಸ್ಟಾರ್ ದಂಪತಿಗಳಾದ ನಟ ದಿಗಂತ್ ಮತ್ತು ಐಂದ್ರಿತಾ ರೇ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಅನಿಕಾ ನೀಡಿದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಈ ಹಿನ್ನಲೆಯಲ್ಲಿ ಇದೀಗ ಸ್ಟಾರ್ ದಂಪತಿಗಳು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ನಟ ದಿಗಂತ್ ಹಾಗೂ ನಟಿ ಐಂದ್ರಿತಾ ಅವರನ್ನು ಈಗಾಗಲೇ ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆ ಬಳಿಕ ದಂಪತಿಯನ್ನು ಸಿಸಿಬಿ ವಶಕ್ಕೆ ಪಡೆಯುತ್ತಾ ಕಾದುನೋಡಬೇಕಿದೆ.