Kannada Rajyotsava – Home Add
Valmiki Jayanti Add

ಡ್ರಗ್ಸ್ ಆರೋಪಿಗಾಗಿ ಬಾಲಿವುಡ್ ನಟನ ಮನೆಯಲ್ಲಿ ಸಿಸಿಬಿ ಶೋಧ

ವಿವೇಕ್ ಒಬೆರಾಯ್ ನಿವಾಸದ ಮೇಲೆ ಸಿಸಿಬಿ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ವಿವೇಕ್ ಒಬೇರಾಯ್ ನಿವಾಸದ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ಆಳ್ವಾ, ನಾಪತ್ತೆಯಾಗಿದ್ದು, ಆದಿತ್ಯಾ ಆಳ್ವಾವಾ ನಟ ವಿವೇಕ್ ಒಬೆರಾಯ್ ಬಾಮೈದನಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಆದಿತ್ಯ ಆಳ್ವಾ ತಲೆಮರೆಸಿಕೊಳ್ಳಲು ವಿವೇಕ್ ಒಬೆರಾಯ್ ಸಹಾಯಮಾಡಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಆರೋಪಿ ಆದಿತ್ಯ ಆಳ್ವಾನಿಗೆ ವಿವೇಕ್ ಒಬೆರಾಯ್ ತನ್ನ ಮನೆಯಲ್ಲಿ ಆಶ್ರಯ ನೀಡಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅವರ ಮನೆಯಲ್ಲಿ ಸರ್ಚ್ ಮಾಡಲು ಬೆಂಗಳೂರು ಸಿಸಿಬಿ ಪೊಲೀಸರು ನಿನ್ನೆಯೇ ಮುಂಬೈಗೆ ತೆರಳಿದ್ದರು. ಆದರೆ ಮುಂಬೈ ಪೊಲೀಸರು ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ವಿವೇಕ್ ಒಬೆರಾಯ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.