Beereshwara add4
Crease wise add 8
KLE1099 Add

ಸಿಸಿಬಿ ವಿಚಾರಣೆ ಮುಗಿಸಿ ಹೊರ ಬಂದ ತಾರಾ ದಂಪತಿ

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ನಟ ದಿಗಂತ್ ಹಾಗೂ ಪತ್ನಿ ನಟಿ ಐಂದ್ರಿತಾ ರೇ ಅವರ ಸಿಸಿಬಿ ವಿಚಾರಣೆ ಅಂತ್ಯವಾಗಿದ್ದು, ದಂಪತಿಗಳು ಸಿಸಿಬಿ ಕಚೇರಿಯಿಂದ ಹೊರ ಬಂದಿದ್ದಾರೆ.

ಸಿಸಿಬಿ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿಗಂತ್ ಹಾಗೂ ಐಂದ್ರಿತಾ, ಬಹುತೇಕ ಮೊದಲ ಹಂತದ ವಿಚಾರಣೆ ಮುಗಿಸಿದ್ದೇವೆ. ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇವೆ. ಸಿಸಿಬಿ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧ ಎಂದು ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ನಟ ದಿಗಂತ್ ಹಾಗೂ ನಟಿ ಐಂದ್ರಿತಾ ಅವರ ಮೊದಲ ಹಂತದ ವಿಚಾರಣೆ ಮುಗಿಸಿದ್ದು, ಸಾಕಷ್ಟು ಮಾಹಿತಿ ಕಲೆ ಹಾಕಿದ್ದೇವೆ. ನಾಲ್ಕು ಗಂಟೆಗಳ ಕಾಲ ವಿಚಾರಣೆಗೆ ಇಬ್ಬರೂ ಸಹಕರಿಸಿದ್ದಾರೆ. ಸಾಕಷ್ಟು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಸಧ್ಯಕ್ಕೆ ಅವರ ವಿಚಾರಣೆ ಮುಗಿದ ಹಿನ್ನಲೆಯಲ್ಲಿ ಸಿಸಿಬಿ ಕಚೇರಿಯಿಂದ ತೆರಳಿದ್ದಾರೆ. ಅಗತ್ಯವಿದ್ದರೆ ಮತ್ತೊಮ್ಮೆ ಅವರನ್ನು ವಿಚಾರಣೆಗೆ ಕರೆಯಲಾಗುವುದು ಎಂದು ಹೇಳಿದರು.