Advertisement -Home Add

ಪರಪ್ಪನ ಅಗ್ರಹಾರ ಜೈಲು ಪಾಲಾದ ನಟಿ ಸಂಜನಾ ಗಲ್ರಾಣಿ

ಸೆ.18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾಣಿ ಅವರನ್ನು 2 ದಿನಗಳ ಕಾಲ ನ್ಯಾಯಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಂಜನಾ ಅವರ 11 ದಿನಗಳ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾದ ಹಿನ್ನಲೆಯಲ್ಲಿ ನಟಿಯನ್ನು ಇಂದು ಸಿಸಿಬಿ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಲಯ ಸಂಜನಾ ಅವರನ್ನು 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದೆ.

ಅಲ್ಲದೇ ಸೆ.18ರಂದು ನ್ಯಾಯಾಂಗ ಬಂಧನ ಅವಧಿ ಮುಗಿದ ಬಳಿಕ ಸಂಜನಾರನ್ನು ಎನ್ ಡಿಪಿಎಸ್ ವಿಶೇಷ ಕೋರ್ಟ್ ಗೆ ಹಾಜರು ಪಡಿಸುವಂತೆ ಸೂಚಿಸಿ 33ನೇ ಸಿಸಿಹೆಚ್ ಕೋರ್ಟ್ ಗೆ ಪ್ರಕರಣ ವರ್ಗಾಯಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಒಟ್ಟಾರೆ ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ನಟಿ ರಾಗಿಣಿ ಬೆನ್ನಲ್ಲೇ ಇದೀಗ ಸಂಜನಾ ಕೂಡ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.