Beereshwara add 9
KLE1099 Add

ಹೌದು, ಅವರು ನನ್ನ ಸಂಪರ್ಕದಲ್ಲಿದ್ದಾರೆ; ಸಿದ್ದರಾಮಯ್ಯ

ಕುಮಾರಸ್ವಾಮಿ ಹೇಳಿಕೆಗೆ ಏನೂ ಹೇಳಲ್ಲ ಎಂದ ವಿಪಕ್ಷ ನಾಯಕ

ಪ್ರಗತಿವಾಹಿನಿ ಸುದ್ದಿ; ಬಾದಾಮಿ; ಬಿಜೆಪಿ, ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಆದರೆ ಅವರ ಹೆಸರನ್ನು ಬಹಿರಂಗಪಡಿಸಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ, ಜೆಡಿಎಸ್ ನ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಕಾಂಗ್ರೆಸ್ ಗೆ ಬರುತ್ತಾರೆ. ಯಾರ್ಯಾರು ಸಂಪರ್ಕದಲ್ಲಿದ್ದಾರೆ, ಅವರ ಹೆಸರು ಏನು ಎಂದು ನಾನು ಹೇಳಲ್ಲ, ಈ ಬಗ್ಗೆ ನಿನ್ನೆಯೂ ನಾನು ಹೇಳಿದ್ದೆ. ಪಕ್ಷದ ಸಿದ್ಧಾಂತ, ನಾಯಕತ್ವ ಒಪ್ಪಿ ಬರುವವರಿಗೆ ಸ್ವಾಗತ ಎಂದರು.

ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗಳ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಪ್ರಜಾಪ್ರಭುತ್ವದಲ್ಲಿ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿಯಿರಬೇಕು. ಕೋಪದಿಂದ ಏನೂ ಸಾಧ್ಯವಿಲ್ಲ ಎಂದು ಹೇಳಿದರು.

ನಿನ್ನೆ ಕೂಡ ಬಿಜೆಪಿ, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ ಎಷ್ಟು ಜನ, ಯಾರ್ಯಾರು ಎಂಬುದನ್ನು ಬಹಿರಂಗಪಡಿಸಲ್ಲ ಎಂದಿದ್ದ ಸಿದ್ದರಾಮಯ್ಯ, ಇದೀಗ ನಮ್ಮ ಸಂಪರ್ಕದಲ್ಲಿದ್ದ ಬಿಜೆಪಿ, ಜೆಡಿಎಸ್ ಶಾಸಕರೆಲ್ಲರೂ ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.
ಭೀಕರ ರಸ್ತೆ ಅಪಘಾತ; ಬಿಜೆಪಿ ಶಾಸಕನ ಪುತ್ರ ಸೇರಿ 7 ವಿದ್ಯಾರ್ಥಿಗಳು ದುರ್ಮರಣ

You cannot copy content of this page