Yoga add Final 1
KLE1099 Add

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ ಕನ್ನಡ ಬಿಟ್ಟು ಹಿಂದಿ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆ ರಕ್ಷಿಸಿವವರು ಯಾರು?

ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ?; ಕಿಡಿಕಾರಿದ ಸಿದ್ದರಾಮಯ್ಯ

GIT Add 3
Beereshwara add 12

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಮತ್ತೆ ಕನ್ನಡ ಕಡೆಗಣಿಸುವ ಮೂಲಕ ಹಿಂದಿ ಹೇರಿಕೆ ಬೆಂಬಲಿಸುತ್ತಿದ್ದು, ಕನ್ನಡ ಭಾಷೆ, ಕನ್ನಡಿಗರಿಗೆ ಅವಮಾನ ಮಾಡುತ್ತಿದೆ. ಕೇಂದ್ರದ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿ ಮೆರೆಸುತ್ತಿರುವುದು ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಅವರ ‘ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ವೆಬ್ ಸೈಟ್ ನಲ್ಲಿಯೂ ಹಿಂದಿ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ. ರಾಜ್ಯ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನೀಲ್ ಕುಮಾರ್ ಅವರು ಸ್ಪಷ್ಟಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು‌ ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರ ಉಳಿಸಿಕೊಳ್ಳಲು ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಕಾರ್ಕಳ ಸುನೀಲ್ ಕುಮಾರ್ ಅವರಿಗೆ ಇಂಥಾ ಗುಲಾಮಿ‌ ಮನಸ್ಥಿತಿ ಬರಬಾರದಿತ್ತು..ಎಂದು ಕಿಡಿಕಾರಿದ್ದಾರೆ.

Home add- Bottom