Advertisement -Home Add

ಶಿರಾ ಉಪಚುನಾವಣೆ; ಕೈ ಅಭ್ಯರ್ಥಿ ಆಯ್ಕೆ

ಇಂದಿನಿಂದಲೇ ಚುನಾವಣಾ ಕೆಲಸ ಆರಂಭ ಎಂದ ಡಿಕೆಶಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿರಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಟಿ.ಬಿ ಜಯಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಬಂದ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಿರಾ ಉಪಚುನಾವಣೆ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತು ಸಭೆ ನಡೆಸಿದರು. ಸಭೆಯಲ್ಲಿ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಸಭೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ಮಾಡಿದ್ದೇವೆ. ಶಿರಾ ಉಪ ಚುನಾವಣೆಯನ್ನು ಪರಮೇಶ್ವರ್ ಅವರ ನೇತೃತ್ವತ್ವದಲ್ಲಿ ನಡೆಸುತ್ತೇವೆ. ರಾಜಣ್ಣ ಕೋ ಚೇರ್ಮನ್ ಆಗಿ ಸಾಥ್ ಕೊಡುತ್ತಾರೆ. ಪಕ್ಷದ ಅಭ್ಯರ್ಥಿಯಾಗಿ ಟಿ.ಬಿ ಜಯಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.

ಕೆ.ಎನ್ ರಾಜಣ್ಣನವರೇ ಜಯಚಂದ್ರ ಹೆಸರು ಸೂಚಿಸಿದ್ದಾರೆ. ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ವರಿಷ್ಠರಿಗೆ ಇದನ್ನೇ ಕಳಿಸಿಕೊಡುತ್ತೇವೆ. ಇಂದಿನಿಂದಲೇ ಉಪಚುನಾವಣೆ ಕಾರ್ಯ ಪ್ರಾರಂಭವಾಗುತ್ತದೆ ಎಂದು ತಿಳಿಸಿದರು.