Athani Takkennavar
Beereshwara13
GIT add4

ಉಜ್ಜಯಿನಿ ದೇವಸ್ಥಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರ ಗಲಾಟೆ; ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ

ಬ್ಯಾರಿಕೇಡ್ ಬೀಳಿಸಿ ದಾಂಧಲೆ

KLE1099 Add

ಪ್ರಗತಿವಾಹಿನಿ ಸುದ್ದಿ; ಭೋಪಾಲ್: ಬಿಜೆಪಿ ಸಂಸದ, ಯುವಮೋರ್ಚಾ ನಾಯಕ ತೇಜಸ್ವಿ ಸೂರ್ಯ ಬೆಂಬಲಿಗರು ಉಜ್ಜಯಿನಿ ಮಹಾಕಾಳ ದೇವಸ್ಥಾನದಲ್ಲಿ ಗಲಾಟೆ ಮಾಡಿ, ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಉಜ್ಜಯಿನಿ ಮಹಾಕಾಳ ದೇವಸ್ಥಾನಕ್ಕೆ ಆಗಮಿಸಿದ್ದು, ಈ ವೇಳೆ ತೇಜಸ್ವಿ ಸೂರ್ಯ ಅವರಿಗೆ ಮಾತ್ರ ದೇವಸ್ಥಾನದ ಒಳಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಅವರ ಬೆಂಬಲಿಗರಿಗೆ ಅವಕಾಶ ನಿರಾಕರಿಸಲಾಗಿದೆ ಎನ್ನಲಾಗಿದೆ. ಇದರಿಂದ ತೇಜಸ್ವಿ ಸೂರ್ಯ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ.

ದೇವಸ್ಥಾನ ಪ್ರವೇಶಿಸಲು ತೇಜಸ್ವಿ ಸೂರ್ಯ ಅವರಿಗೆ ಮಾತ್ರ ಅನುಮತಿ ನೀಡಿದ್ದು, ಅವರ ಬೆಂಬಲಿಗರಿಗೆ, ಕೆಲ ಕಾರ್ಯಕರ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಾರ್ಯಕರ್ತರು ದೇವರ ದರ್ಶನಕ್ಕೆ ಅವಕಾಶ ನೀಡುವಂತೆ ಕೇಳಿದ್ದಾರೆ. ಎಲ್ಲರಂತೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವಂತೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗಿದೆ. ಇದರಿಂದ ರೊಚ್ಚಿಗೆದ್ದ ತೇಜಸ್ವಿ ಸೂರ್ಯ ಬೆಂಬಲಿಗರು ಬ್ಯಾರಿಕೇಡ್ ಗಳನ್ನು ಬೀಳುಸಿ, ದೇವಾಲಯದ ಒಳಗೆ ನುಗ್ಗಲು ಮುಂದಾಗಿದ್ದಾರೆ. ಅಲ್ಲದೇ ಸೆಕ್ಯೂರಿಟಿಗಳ ಮೇಲೂ ಹಲ್ಲೆ ನಡೆಸಿ, ಅರ್ಚಕರನ್ನೂ ನೂಕಾಡಿದ್ದಾರೆ. ದೇವಸ್ಥಾನದ ಆವರಣದಲ್ಲಿ ಕೆಲಕಾಲ ಗಲಾಟೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಾಂಗ್ರೆಸ್ ನವರ ಈ ಕೆಲಸಗಳಿಂದ ನಾನು ಮತ್ತಷ್ಟು ಗಟ್ಟಿಯಾಗ್ತೀನಿ; ತಿರುಗೇಟು ನೀಡಿದ ಸಿಎಂ

Nivedita Navalgund
You cannot copy content of this page