Advertisement -Home Add

ಹುಟ್ಟುಹಬ್ಬಕ್ಕೆ ಶುಭ ಕೋರುವ ನೆಪದಲ್ಲಿ ಚಾಕು ಇರಿದು ಕೊಂದ ದುಷ್ಕರ್ಮಿಗಳು

ಹಳೆ ದ್ವೇಷ ಕೊಲೆಯಲ್ಲಿ ಅಂತ್ಯ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಹುಟ್ಟುಹಬ್ಬಕ್ಕೆ ಶುಭ ಕೋರಲೆಂದು ಬಂದ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಎನ್.ಆರ್ ಕಾಲೋನಿಯಲ್ಲಿ ನಡೆದಿದೆ.

ಹತ್ಯೆಯಾದ ಯುವಕ 22 ವರ್ಷದ ಅನುಕುಮಾರ್ ಎಂದು ತಿಳಿದುಬಂದಿದೆ. ಹಳೆ ವೈಷಮ್ಯವೇ ಕೊಲೆಗೆ ಕಾರಣ ಎಂದು ಹೇಳಲಾಗಿದೆ.

ಅನುಕುಮಾರ್ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಆತನಿಗೆ ವಿಶ್ ಮಾಡಬೇಕು ಎಂದು ರಾಜು ಹಾಗೂ ಆತನ ಸ್ನೇಹಿತರು ಬಂದಿದ್ದರು. ಪಾರ್ಟಿ ವೇಳೆ ಅನುಕುಮಾರ್ ಗೆ ಶುಭ ಕೋರಬೇಕೆಂದು ಮುಂದೆ ಬಂದು ಏಕಾಏಕಿ ಆತನಿಗೆ ಚಾಕುವಿನಿಂದ ಇರಿದು ಕೊಂದಿದ್ದಾರೆ. ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.