KLE1099 Add

ಮತ್ತೋರ್ವ ಶಾಸಕನ ರಾಜೀನಾಮೆ; ಉತ್ತರ ಪ್ರದೇಶದಲ್ಲಿ ಮುಂದುವರೆದ ಬಿಜೆಪಿ ನಾಯಕರ ರಾಜೀನಾಮೆ ಪರ್ವ

ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಭಾರಿ ಹಿನ್ನಡೆ

Beereshwara 6

ಪ್ರಗತಿವಾಹಿನಿ ಸುದ್ದಿ; ಲಕ್ನೋ: ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ಶಾಸಕರು ಅಹಗೂ ಸಚಿವರ ರಾಜೀನಾಮೆ ಪರ್ವ ಮುಂದುವರೆದಿದೆ. ಇಂದು ಶಾಸಕ ಮುಖೇಶ್ ವರ್ಮಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ರಾಜೀನಾಮೆ ನೀಡಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಫಿರೋಜಾಬಾದ್ ಜಿಲ್ಲೆಯ ಶಿಕೋಹಾಬಾದ್ ಕ್ಷೇತ್ರದ ಶಾಸಕ ಮುಕೇಶ್ ವರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಯೋಗಿ ಆದಿತ್ಯನಾಥ್ ಸರ್ಕಾರ ದಲಿತರು, ಅಲ್ಪಸಂಖ್ಯಾತರು, ರೈತರು, ನಿರುದ್ಯೋಗಿಗಳನ್ನು ನಿರ್ಲಕ್ಷ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರದ ಈ ನಡೆಗಳಿಗೆ ಬೇಸತ್ತು ಇಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಕಾರ್ಮಿಕ ಇಲಕಹೆ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಸಚಿವ ಧಾರಾಸಿಂಗ್ ಚೌವ್ಹಾಣ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಐವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಗೆ ಭಾರಿ ಹಿನ್ನಡೆಯಾಗುತ್ತಿದೆ.
ಆಭರಣ ಪ್ರಿಯರಿಗೆ ಶಾಕ್; ಹಬ್ಬದ ಸಂದರ್ಭದಲ್ಲಿ ಏರಿಕೆಯಾಯ್ತು ಬಂಗಾರದ ಬೆಲೆ

You cannot copy content of this page