Cancer Hospital 2
Beereshwara 36
LaxmiTai 5

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿಜೆಪಿ ಮುಖಂಡ ಎಂ.ಬಿ.ಜೀರಲಿ

Anvekar 3
GIT add 2024-1

ಪ್ರಗತಿವಾಹಿನಿ‌ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಖಂಡನೀಯ ಎಂದು ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಹೇಳಿದರು.

ಬೆಳಗಾವಿ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಎಂ.ಬಿ.ಜೀರಲಿ ಕಾಂಗ್ರೆಸ್ ಸರಕಾರ ರಚನೆಯಾಗಿ ಒಂದು ವರ್ಷ ಕಳೆದಿದೆ. ಆದರೆ ರಾಜ್ಯದಲ್ಲಿ ಕೋಮು, ಗಲಭೆ ಹೆಚ್ಚಾಗಿದೆ. ಪೊಲೀಸರು ಇಲ್ಲಿಯವರೆಗೂ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಬಂದವರು. ಆದರೆ ಕಾಂಗ್ರೆಸ್ ಸರಕಾರ ಪೊಲೀಸರ ರಕ್ಷಣೆಗೆ ನಿಲ್ಲದೆ ಗಲಭೆ ಮಾಡುವವರಿಗೆ ಬೆಂಬಲ ಕೊಡುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.  ರಾಜ್ಯದಲ್ಲಿ ಸರಣಿ ಕೊಲೆಗಳಾಗುತ್ತಿವೆ. ಕಾನೂನು ಸುವ್ಯವಸ್ಥೆ ಹದಗೆಡಿಸುವವರ ವಿರುದ್ಧ ಕಾಂಗ್ರೆಸ್ ಸರಕಾರ ನಿಲ್ಲುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. 

ರಾಜ್ಯದಲ್ಲಿ ಪಂಚ ಗ್ಯಾರಂಟಿ ಕೊಟ್ಟಿರುವುದು ದೊಡ್ಡ ಸಾಧನೆಯಾಗಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ಸರಕಾರ. ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ನಯಾ ಪೈಸೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಆರೋಪಿಸುತ್ತಿದ್ದಾರೆ ಎಂದರು.

Emergency Service

ಈ ಹಿಂದೆ ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದವರಿಗೆ ಇಂದಿನ ಡಿಸಿಎಂ ಡಿ.ಕೆ.ಶಿವಕುಮಾರ ಅವರು ನಮ್ಮ ಸಹೋದರರು ಎಂದು ಹೇಳುತ್ತಾರೆ. ಅಲ್ಲದೆ, ವಿಧಾನಸೌಧದಲ್ಲಿ ನೂತನವಾಗಿ ರಾಜಸಭೆಗೆ ಆಯ್ಕೆಯಾದಾಗ ಪಾಕಿಸ್ತಾನ ಪರ ಘೋಷಣೆ ಕೂಗಿದರೂ ಅವರ ಮೇಲೆ ಕ್ರಮ ಕೈಗೊಂಡಿಲ್ಲ.‌ ಕಳೆದೊಂದು ವರ್ಷದಲ್ಲಿ ರಾಜ್ಯದಲ್ಲಿ ಆರ್ಥಿಕ ಅಪರಾಧದಲ್ಲಿ ಕರ್ನಾಟಕ ಟಾಪ್ 10 ರಲ್ಲಿ ಬಂದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಅತ್ಯಂತ ದುರ್ಬಲ ಗೃಹ ಸಚಿವರಿದ್ದಾರೆ. ಕಟ್ಟುನಿಟ್ಟಿನ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲರಾಗಿದ್ದಾರೆ. ಕೂಡಲೇ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಬೆಳಗಾವಿ ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಪಾಲಿಕೆ ಸದಸ್ಯ ಹನುಮಂತ ಕೊಂಗಾಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Bottom Add3
Bottom Ad 2