*ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸದಂತೆ ಕಾನೂನು ಜಾರಿ ಮಾಡಬೇಕು: ಶಾಸಕ ಯತ್ನಾಳ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಆದರೆ ಒಮ್ಮೆ ಗೆದ್ದು ಮತ್ತೆ ಮತ್ತೆ ಬೇರೆ ಕ್ಷೇತ್ರಗಳಲ್ಲಿ ಸ್ಫರ್ಧಿಸಿದರೆ ಬರೀ ವೆಚ್ಚವಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ಕ್ಷೇತ್ರದಿಂದ ಶಾಸಕ ಅಥವಾ ಸಂಸದರಾಗಿ ಆಯ್ಕೆಯಾದವರು ಮತ್ತೆ ಬೇರೆ ಕ್ಷೇತ್ರಗಳಲ್ಲಿ ಸ್ಪರ್ಧಿಸದಂತೆ ಕಾನೂನು ಜಾರಿ ಮಾಡಬೇಕು. ಕನಕಪುರದಿಂದ ಸ್ಪರ್ಧಿಸಿ ಗೆದ್ದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಈಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತಮ್ಮ ಸೋದರ ಡಿ.ಕೆ.ಸುರೇಶ್ ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದ ಹಿನ್ನೆಲೆಯಲ್ಲಿ ಡಿಕೆಶಿ ಕೈಗೊಂಡಿರುವ ಈ ನಿರ್ಧಾರವನ್ನು ಯತ್ನಾಳ್ ಪರೋಕ್ಷವಾಗಿ ಟೀಕಿಸಿದ್ದಾರೆ.
ಲೋಕಸಭಾ ಚುನಾವಣೆಗಳ ನಂತರ ರಾಜ್ಯದಲ್ಲಿ ಮತ್ತೆ ಮರು ಚುನಾವಣೆ ಘೋಷಿಸಲಾಗುತ್ತಿದೆ. ಇದು ಚುನಾವಣಾ ಆಯೋಗಕ್ಕೆ ಸುಮ್ಮನೆ ಹೊರೆಯಾಗುತ್ತದೆ. ಇದನ್ನು ನಿಲ್ಲಿಸಲು ಹೊಸ ಕಾನೂನು ಅವಶ್ಯ. ಮತ್ತೆ ಮರು ಚುನಾವಣೆ ಜಾರಿಯಾದರೆ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತದೆ. ಲೋಕಸಭಾ ಚುನಾವಣೆಯಿಂದ ಈಗಾಗಲೇ ಹಿನ್ನಡೆಯಾಗಿದೆ. ಆದ್ದರಿಂದ ಈ ಬಗ್ಗೆಯೂ ಹೊಸ ಕಾನೂನು ಮಾಡಬೇಕಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ