Kannada NewsLatestNational

*ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಸೆಕ್ಯೂರಿಟಿ ಗಾರ್ಡ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕೋಲ್ಕತ್ತಾದ ಕಾನೂನು ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಸೆಕ್ಯೂರಿಟಿ ಗಾರ್ಡ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಘಟನೆಯ ವೇಳೆ ಸೆಕ್ಯೂರಿಟಿ ಗಾರ್ಡ್ ನನ್ನಗೆ ಸಹಾಯಕ್ಕೆ ಬಂದಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದರು.

ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸುವ ನಿಟ್ಟಿನಲ್ಲಿ ಸೆಕ್ಯೂರಿಟಿ ಗಾರ್ಡ್ ನನ್ನು ವಶಕ್ಕೆ ಪಡೆದು ಬಳಿಕ ಬಂಧಿಸಲಾಗಿದೆ. ಜೂನ್ ೨೫ರಂದು ವಿದ್ಯಾರ್ಥಿನಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಆರೋಪಿಗಳು ಆಕೆಯನ್ನು ಶಿಕ್ಷಣ ಸಂಸ್ಥೆಯ ಕೊಠಡಿಗೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಕಸಬ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ತೃಣಮೂಲ ನಾಯಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ಇದೀಗ ಸೆಕ್ಯೂರಿಟಿ ಗಾರ್ಡ್ ಕೂಡ ಅರೆಸ್ಟ್ ಆಗಿದ್ದಾರೆ.

Home add -Advt

Related Articles

Back to top button