ಪ್ರಗತಿವಾಹಿನಿ ಸುದ್ದಿ, ಬಾಗಲಕೋಟೆ: ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಬನಹಟ್ಟಿ ವಕೀಲರ ಸಂಘದ ಉಪಾಧ್ಯಕ್ಷ ರಾಜಕುಮಾರ ಗೂಗಾಡ(46) ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ಮನೆ ಹಿಂಭಾಗದ ಕಬ್ಬಿನ ಹೊಲದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಜೂ.24ರಂದು ಬಹಿರ್ದೆಸೆಗೆ ಹೋಗುವುದಾಗಿ ಹೇಳಿ ಹೋಗಿದ್ದ ಅವರು ಕಾಣೆಯಾಗಿದ್ದರು. ಮನೆಯವರು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಶನಿವಾರ ಹೊಲದ ಕಡೆಯಿಂದ ದುರ್ವಾಸನೆ ಬರುತ್ತಿರುವುದನ್ನು ಕಂಡು ಪರಿಶೀಲಿಸಿದಾಗ ಅವರ ಮೃತದೇಹ ಜೀರ್ಣಾವಸ್ಥೆಯಲ್ಲಿ ಪತ್ತೆಯಾಗಿದೆ. ಶವದ ಪಕ್ಕದಲ್ಲೇ ವಿಷಯದ ಬಾಟಲಿಯೊಂದು ಸಹ ಬಿದ್ದಿರುವುದು ಕಂಡುಬಂದಿದ್ದು ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಾಜಕುಮಾರ ಆಗಾಗ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬಸ್ಥರ ಬಳಿ ಹೇಳಿಕೊಳ್ಳುತ್ತಿದ್ದರೆನ್ನಲಾಗಿದೆ. ಬನಹಟ್ಟಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಗಂಡು ಮಗುವಿಗೆ ಜನ್ಮ ನೀಡಿದ ನಟಿ ಅಮೃತಾ ನಾಯ್ಡು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ