Latest

*ವಕೀಲ ಕೆ.ಎನ್.ಜಗದೀಶ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಖ್ಯಾತ ವಕೀಲ ಕೆ.ಎನ್.ಜಗದೀಶ್ ಕುಮಾರ್ ರನ್ನು ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಕಾರಣಕ್ಕೆ ಜಗದೀಶ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಕೀಲ ಜಗದೀಶ್ ಗಾಗಿ ಹುಡುಕಾಟ ನಡೆಸಿದ್ದರು.

ಇದೀಗ ವಕೀಲ ಜಗದೀಶ್ ಗೋವಾದಲ್ಲಿ ಪತ್ತೆಯಾಗಿದ್ದು, ಅವರನ್ನು ಬಂಧಿಸಿ ಕರೆತರಲಾಗಿದೆ. ವಕೀಲ ಕೆ.ಎನ್.ಜಗದೀಶ್ ವಿರುದ್ಧ ಜಾತಿ ನಿಂದನೆ ಪ್ರಕರನ ಸಂಬಂಧ ಕೇಸ್ ದಾಖಲಾಗಿತ್ತು. ವಾರೆಂಟ್ ಜಾರಿಯಾಗಿದ್ದರೂ ಕೋರ್ಟ್ ಗೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.


Home add -Advt

Related Articles

Back to top button