
ಪ್ರಗತಿವಾಹಿನಿ ಸುದ್ದಿ: 40 ವಕೀಲರ ವಿರುದ್ಧ ದೂರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಸಿಡಿದೆದ್ದಿದ್ದ ವಕೀಲರು ರಾಮನಗರದಲ್ಲಿ ಪ್ರತಿಭಟನೆ ನಡೆಸಿದ್ದರು. ಪಿಎಸ್ ಐ ತನ್ವೀರ್ ಹುಸೇನ್ ಸಸ್ಪೆಂಡ್ ಮಾಡುವಂತೆ ಆಗ್ರಹಿಸಿದ್ದರು.
ರಾಮನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸಾವಿರಾರು ವಕೀಲರು ಧರಣಿ ಕುಳಿತು ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ವಕೀಲರ ಪ್ರತಿಭಟನೆ ರಾಜಕೀಯ ತಿರುವು ಪಡೆದಿತ್ತು. ಪ್ರತಿಭಟನೆಗೆ ಮಣಿದು ಕೊನೆಗೂ ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್ ಐ ತನ್ವೀರ್ ಹುಸೇನ್ ರನ್ನು ಅಮಾನತು ಮಾಡಲಾಗಿದೆ.
ಪಿಎಸ್ ಐ ಅಮಾನತು ಮಾಡಿರುವ ಬೆನ್ನಲ್ಲೇ ವಕೀಲರು ಪ್ರತಿಭಟನೆ ಕೈಬಿಟ್ಟಿದ್ದಾರೆ. ವಕೀಲರ ಪ್ರತಿಭಟನೆ ಹಾಗೂ ಪಿಎಸ್ ಐ ಸಸ್ಪೆಂಡ್ ವಿಚಾರ ವಿಧಾನಮಂಡಲದಲ್ಲಿಯೂ ಪ್ರತಿಧ್ವನಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ