ಪಕ್ಷ ನಿಷ್ಠೆಗಾಗಿ ಮಂತ್ರಿ ಸ್ಥಾನ ಸಿಕ್ಕಿದೆ : ಲಕ್ಷ್ಮಣ್ ಸವದಿ
ಪ್ರಗತಿವಾಹಿನಿ ಸುದ್ದಿ – ಬೆಂಗಳೂರು : ರಾಜಕೀಯ ಲೆಕ್ಕಾಚಾರ ಉಲ್ಟಾ ಪಲ್ಟಾ ಆಗಿ, ಸಚಿವ ಸಂಪುಟ ರಚನೆಯ ನಂತರ ಸ್ವತಃ ಬಿಜೆಪಿಯಲ್ಲೇ ಆಂತರಿಕ ಭಿನ್ನಮತ ಉಂಟಾಗಿದೆ. ಬಿಜೆಪಿ ವಲಯದ ಕಣ್ಣು ಇದೀಗ ಲಕ್ಷ್ಮಣ್ ಸವದಿ ಮೇಲೆ ನೆಟ್ಟಿದೆ.
ಇದನ್ನೂ ಓದಿ – ಜಾರಕಿಹೊಳಿ ಕುಟುಂಬಕ್ಕೆ ಮಲ್ಟಿಪಲ್ ಶಾಕ್!
ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ್ ಸವದಿಗೆ ಮಂತ್ರಿ ಸ್ಥಾನ ಕೊಡುತ್ತಿರುವ ಬಿಜೆಪಿ ಯಾವ ಲೆಕ್ಕಾಚಾರಕ್ಕೆ ಇಳಿದಿದೆ ಎಂದು ಬಿಜೆಪಿ ವಲಯದಲ್ಲೇ ಸಕತ್ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಲಕ್ಷ್ಮಣ್ ಸವದಿ, ಪಕ್ಷವು ಕಾರ್ಯ ನಿಷ್ಠೆ ಗಮನಿಸಿ ನನಗೆ ಮಂತ್ರಿ ಸ್ಥಾನ ಕೊಟ್ಟಿರಬಹುದು ಎಂದಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಹಲವಾರು ನಾಯಕರಿದ್ದರೂ ಸಹ ಪಕ್ಷವು ನಿಮ್ಮನ್ನೇ ಗುರುತಿಸಲು ಕಾರಣ ಏನಿರಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ನಾಯಕರು ಯಾರೂ ಇಲ್ಲ, ನಾವೆಲ್ಲರೂ ಒಂದೇ ಕುಟುಂಬದವರು ಎಂದು ಹೇಳಿ ಗಾಯಕ್ಕೆ ಮುಲಾಮು ಹಚ್ಚುವ ಕೆಲಸ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರದ ನಾಯಕರು ನಮ್ಮಿಂದ ಏನೋ ನಿರೀಕ್ಷೆ ಇಟ್ಕೊಂಡು ನಮ್ಮನ್ನು ಗುರುತಿಸಿದ್ದಾರೆ, ಅವರ ನಿರೀಕ್ಷೆಯನ್ನು ಎಂದಿಗೂ ಹುಸಿ ಮಾಡುವುದಿಲ್ಲ. ಪಕ್ಷಕ್ಕಾಗಿ ಶ್ರಮಪಟ್ಟು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಹಾಗೂ ತನ್ನನ್ನು ಆಯ್ಕೆ ಮಾಡಿದವರಿಗೆ ಧನ್ಯವಾದ ತಿಳಿಸಿದ್ದಾರೆ.////
ಇಂದು ಸಂಜೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ