ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಮೊದಲು ವಿಧಾನಸಭೆ ಅಥವಾ ವಿಧಾನ ಪರಿಷತ್‍ಗೆ ಆಯ್ಕೆಯಾಗಿ ಬರಬೇಕು. ಅಲ್ಲಿಯವರೆಗೂ ಅವರನ್ನು ಸಚಿವರನ್ನಾಗಿ ಮಾಡಲು ಬರಲ್ಲ. ವಿಶ್ವನಾಥ್ ತಾಳ್ಮೆಯಿಂದ ಇರಲಿ. ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಸಿಗಲಿದೆ. ಶುಕ್ರದೆಸೆಯೂ ಆರಂಭವಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, ಈಗಾಗಲೇ ರಾಷ್ಟ್ರೀಯ ನಾಯಕರು ಎಂಎಲ್‍ಸಿ ಸ್ಥಾನಕ್ಕೆ ನನ್ನ ಹೆಸರನ್ನು ಅಧಿಕೃತಗೊಳಿಸಿದ್ದಾರೆ. ಹಾಗಾಗಿ ನಾನು ನಾಮಪತ್ರ ಸಲ್ಲಿಸಲ್ಲಿದ್ದೇನೆ. ವಿಶ್ವನಾಥ್ ಅವರು ಮೊದಲು ವಿಧಾನಸಭೆ ಅಥವಾ ವಿಧಾನ ಪರಿಷತ್‍ಗೆ ಆಯ್ಕೆಯಾಗಿ ಬರಬೇಕು. ಮುಂದಿನ ದಿನಗಳಲ್ಲಿ ಹೆಚ್.ವಿಶ್ವನಾಥ್ ಅವರಿಗೆ ಅವಕಾಶಗಳು ಸಿಗಲಿವೆ ಎಂದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರನ್ನು ಸಹ ವಿಧಾನ ಪರಿಷತ್ ಗೆ ಆಯ್ಕೆ ಮಾಡಿ ಸಚಿವ ಸ್ಥಾನ ನೀಡುವ ಚಿಂತನೆಯಲ್ಲಿ ಇದ್ದಾರೆ. ಜೂನ್ ತಿಂಗಳಲ್ಲಿ ಆರ್.ಶಂಕರ್ ಸಹ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಸಚಿವರಾಗುತ್ತಾರೆ ಎಂದು ಹೇಳಿದ್ದಾರೆ. ಯಾವುದೇ ಮನೆಯ ಸದಸ್ಯನಲ್ಲದಿದ್ದರೂ ನನ್ನನ್ನು ಪಕ್ಷ ಡಿಸಿಎಂ ಮಾಡಿತು. ಈ ಸಂಬಂಧ ಅನಾವಶ್ಯಕ ಚರ್ಚೆಗಳು ಸಾಕಷ್ಟು ನಡೆದಿವೆ. ಎಲ್ಲದಕ್ಕೂ ಹೈಕಮಾಂಡ್ ತೆರೆ ಎಳೆದಿದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ