
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜೀವದ ಹಂಗು ತೊರೆದು ರೋಗಿಗಳ ಸೇವೆಯಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರು ಹಾಗೂ ದಾದಿಯರ ಕಾರ್ಯಕ್ಕೆ ಸರಿಸಾಟಿ ಯಾವುದೂ ಇಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.

ಕೊರೋನಾ ಬಗ್ಗೆ ಅರಿವನ್ನು ಮೂಡಿಸಿ, ಎಲ್ಲ ಮುಂಜಾಗ್ರತೆಯ ಕ್ರಮಗಳಾದ ಮಾಸ್ಕ್, ಸ್ಯಾನಿಟೈಜರ್ ಬಳಕೆ, ಸಾಮಾಜಿಕ ಅಂತರದ ಬಗ್ಗೆಯೂ ತಿಳಿಸಿದ ಲಕ್ಷ್ಮಿ ಹೆಬ್ಬಾಳಕರ್, ಅನಗತ್ಯವಾಗಿ ಹೊರಗಡೆ ಬರದೇ ಕುಟುಂಬಸ್ಥರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಮನೆಯಲ್ಲೇ ಇರುವಂತೆ ಮನವರಿಕೆ ಮಾಡಿದರು.
ಈ ಕೋವಿಡ್ ಸಮಯದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಕೆಲಸ ನಿಜಕ್ಕೂ ಪ್ರಶಂಸನೀಯ, ಜೀವದ ಹಂಗನ್ನು ತೊರೆದು ರೋಗಿಗಳ ಸೇವೆಯಲ್ಲಿ ನಿರತರಾಗಿರುವ ಅವರಿಗೆ ಹೃದಯಸ್ಪರ್ಶಿ ಧನ್ಯವಾದಗಳು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ