Education

*ಕಾಮೆಡ್-ಕೆ UGET ಪರೀಕ್ಷೆಯಲ್ಲಿ ಮೂಡಬಿದರೆ ವಿದ್ಯಾರ್ಥಿ ಮೊದಲ ರ್ಯಾಂಕ್*

ಪ್ರಗತಿವಾಹಿನಿ ಸುದ್ದಿ: ಕಾಮೆಡ್-ಕೆ-ಯುಜಿಇಟಿ ಪರೀಕ್ಷೆಯಲ್ಲಿ ಮೂಡಬಿದರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ರಾಷ್ಟ್ರಮಟ್ಟದಲ್ಲೇ ಮೊದಲ ರ್ಯಾಂಕ್ ಪಡೆದಿದ್ದಾರೆ.

ಮೂಡಬಿದರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಮೊದಲ ರ್ಯಾಂಕ್ ಪಡೆದಿದ್ದಾರೆ. 1,13,111 ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದರು. ಶಿಶಿರ್ ಶೆಟ್ಟಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 664ನೇ ಸ್ಥಾನ ಗಳಿಸಿದ್ದಾರೆ.

ಜೆಇಇ ಮೇನ್ಸ್ ನಲ್ಲಿ 99.971 ಪರ್ಸೆಂಟ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಯಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ 4ನೇ ರ್ಯಾಂಕ್, ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ದ್ವಿತೀಯ ಪಿಯುಸಿಯಲ್ಲಿ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button