Belagavi NewsBelgaum NewsKannada NewsKarnataka NewsLatest

ರತನ್ ಟಾಟಾ ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದರು – ಲಕ್ಷ್ಮೀ ಹೆಬ್ಬಾಳಕರ್

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಖ್ಯಾತ ಉದ್ಯಮಿ ರತನ್ ಟಾಟಾ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ದೂರದೃಷ್ಟಿಯ ಮೂಲಕ ಉದ್ಯಮ ಜಗತ್ತನ್ನು ಆಳಿದ ರತನ್ ಟಾಟಾ, ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದರು. ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ತಮ್ಮ ಹೆಸರು ಉಳಿಯುವಂತೆ ಮಾಡಿದ್ದಾರೆ ಎಂದು ಹೆಬ್ಬಾಳಕರ್ ಸ್ಮರಿಸಿದ್ದಾರೆ. 

ಭಾರತದ ಅಸ್ಮಿತೆ ಬೆಳೆಸಲು ಟಾಟಾ ಅವರ ಪಾತ್ರ ಅತ್ಯಂತ ದೊಡ್ಡದು. ಯುವ ಉದ್ಯಮಿಗಳಿಗೆ ಅವರು ದೊಡ್ಡ ಆದರ್ಶ. ಅವರ ನಿಧನದಿಂದ ದೇಶಕ್ಕೆ ಅಪಾರ ನಷ್ಟವಾಗಿದೆ. ಕೇವಲ ಉದ್ಯಮಿಯಾಗಿ ಮಾತ್ರವಲ್ಲ, ಅವರ ಟ್ರಸ್ಟ್ ಗಳ ಮೂಲಕ ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ. ಅವರು ತಮ್ಮ ಸರಳತೆ ಹಾಗೂ ಪರೋಪಕಾರಕ್ಕಾಗಿ ಹಲವರಿಗೆ ಸ್ಪೂರ್ತಿಯಾಗಿದ್ದಾರೆ. ಅವರ ಕುಟುಂಬಕ್ಕೆ ಮತ್ತು ಟಾಟಾ ಸಮೂಹಕ್ಕೆ ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button