
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು.
ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಕಾಮಗಾರಿ ಮಂಜೂರು ಮಾಡಿಸಲಾಗಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಲ್ಲಿಯೂ ಕ್ಷೇತ್ರದಲ್ಲಿ ಅಭಿವೃದ್ಧಿಯ ಕಾರ್ಯಗಳು ನಿರಂತರವಾಗಿ ಸಾಗುತ್ತಿದೆ.
ಕಾಮಗಾರಿಯ ಈ ಪೂಜಾ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ