

ಪ್ರಗತಿವಾಹಿನಿ ಸುದ್ದಿ, ನವದೆಹಲಿ:
ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿದರು.
ಈ ವೇಳೆ, ಕೇಂದ್ರ ಸರ್ಕಾರದಿಂದ ಇಲಾಖೆಗೆ ಬರಬೇಕಿರುವ ಅನುದಾನವನ್ನು ಬಿಡುಗಡೆ ಮಾಡಬೇಕು, ಜೊತೆಗೆ ಫೇಸ್ ರೆಕಗ್ನೇಷನ್ ಸಿಸ್ಟಮ್ ನಲ್ಲಿರುವ (ಎಫ್ ಆರ್ ಎಸ್) ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು ಎಂದು ಮನವಿಮಾಡಿದರು. ಜೊತೆಗೆ ಪೌಷ್ಟಿಕಾಂಶ ಕೊರತೆ ಎದುರಿಸುತ್ತಿರುವ ಮಕ್ಕಳ ಬಗ್ಗೆ ಹಾಗೂ ರಾಜ್ಯದಲ್ಲಿ ಅಕ್ಕಪಡೆ ರಚನೆ ಸಂಬಂಧ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಿದರು.
ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಹೇಮಾವತಿ
ಉಪಸ್ಥಿತರಿದ್ದರು.