Karnataka NewsLatest
ದೇವಸ್ಥಾನದ ಸ್ಲ್ಯಾಬ್ ಕಾಮಗಾರಿಗೆ ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಹುಲಿಕಟ್ಟಿ ಬಸ್ಸಾಪುರ ಗ್ರಾಮದ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಸ್ಲ್ಯಾಬ್ ಪೂಜಾ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಪೂಜೆ ನೆರವೇರಿಸಿದರು.
ಶಾಸಕರ ಅನುದಾನದಲ್ಲಿ ದೇವಸ್ಥಾನದ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಮತ್ತು ಸಮಯ ಮಿತಿಯಲ್ಲಿ ಪೂರ್ಣಗೊಳಿಸುವಂತೆ ಲಕ್ಷ್ಮಿ ಹೆಬ್ಬಾಳಕರ್ ಗುತ್ತಿಗೆದಾರರಿಗೆ ಸೂಚಿಸಿದರು. ಗ್ರಾಮಸ್ಥರು ಕಾಮಗಾರಿಯ ಮೇಲೆ ನಿಗಾ ಇಟ್ಟು, ದೇವಸ್ಥಾನ ಸುಂದರವಾಗಿ ನಿರ್ಮಾಣವಾಗುವಂತೆ ನೋಡಿಕೊಳ್ಳಿ ಎಂದೂ ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಟ್ರಸ್ಟ್ ಕಮೀಟಿಯವರು, ಸ್ಥಳೀಯರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.



