Latest

ಮಾಜಿ ಸಚಿವ ಜಬ್ಬರ್ ಖಾನ್ ಹೊನ್ನಳ್ಳಿ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ ಹುಬ್ಬಳ್ಳಿ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಜಬ್ಬರ್ ಖಾನ್ ಹೊನ್ನಳ್ಳಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬರ್ ಖಾನ್ ಹೊನ್ನಳ್ಳಿ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Home add -Advt

ಜಬ್ಬರ್ ಖಾನ್ ಹೊನ್ನಳ್ಳಿ ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಜಬ್ಬರ್ ಖಾನ್ ಹೊನ್ನಳ್ಳಿಯವರು ಇದೀಗ ಅನಾರೋಗ್ಯದಿಂದಾಗಿ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಾಜಿ ಸಚಿವರ ಅಗಲಿಕೆಗೆ ಕೆ.ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್, ಅಲ್ತಾಪ್ ಹಳ್ಳೂರು, ಅನಿಲ್ ಕುಮಾರ್ ಪಾಟೀಲ್, ನಾಗರಾಜ್ ಛಬ್ಬಿ ಸೇರಿದಂತೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.

ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ನಿಧನಕ್ಕೆ ಡಿ ಕೆ ಶಿವಕುಮಾರ್ ಸಂತಾಪ:

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹುಬ್ಬಳ್ಳಿಯ ಜಬ್ಬಾರ್ ಖಾನ್ ಹೊನ್ನಳ್ಳಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಎಸ್ ಎಂ ಕೃಷ್ಣ ಅವರ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಆಗಿದ್ದ ಜಬ್ಬಾರ್ ಖಾನ್ ಅವರು ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಅಕ್ಷರ ಸೇವೆ ಮಾಡಿದ್ದಾರೆ. ಸರಳ, ಸಜ್ಜನ, ಮಿತಭಾಷಿ ಆಗಿದ್ದ ಅವರ ಅಗಲಿಕೆ ನೋವು ತಂದಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಜಬ್ಬಾರ್ ಖಾನ್ ಹೊನ್ನಳ್ಳಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿ ಕುಟುಂಬ ಸದಸ್ಯರು, ಬಂಧುಗಳು, ಅಭಿಮಾನಿಗಳಿಗೆ ಸಿಗಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮಲಪ್ರಭಾ ನದಿಗೆ ಹಾರಿದ್ದ ವೃದ್ಧೆ : ರಕ್ಷಿಸಿದ ಯುವಕ

https://pragati.taskdun.com/belgaum-news/old-woman-who-jumped-into-malaprabha-river-rescued-by-young-man/

Related Articles

Back to top button