Kannada NewsKarnataka NewsLatest
ಶನಿವಾರವೂ ಹಲವೆಡೆ ಪ್ರತಿಭಟನೆ: ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶನಿವಾರವೂ ಪ್ರತಿಭಟನೆ ನಡೆಯಿತು.


ಬಿಜೆಪಿ ಸರ್ಕಾರಗಳಿಗೆ ದೇಶದ ಜನರ ಬಗ್ಗೆ ಕಿಂಚಿತ್ತಾದರೂ ಕಾಳಜಿ, ಕನಿಕರ ಇದ್ದರೆ, ಕೂಡಲೇ ಅಗತ್ಯ ವಸ್ತುಗಳ, ಕಾಳು ಕಡಿಗಳ, ಅಡುಗೆ ಎಣ್ಣೆ, ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡಿಸೇಲ್ ಮುಂತಾದ ವಸ್ತುಗಳ ಬೆಲೆಗಳನ್ನು ತಕ್ಷಣವೇ ಇಳಿಸಲಿ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು, ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಚನ್ನರಾಜ ಹಟ್ಟಿಹೊಳಿ, ಸ್ಥಳೀಯ ಜನ ಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ