
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಲ್ಲಿನ ಜನರು ಆಕ್ರೋಶಗೊಂಡು ರಸ್ತೆ ಬಂದ್ ಮಾಡಿರುವ ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣ ಸ್ಪಂದಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಮಂಜೂರಾತಿ ಪಡೆದು, ಚಾಲನೆ ನೀಡಿದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದ ಮರಾಠಾ ಕಾಲೋನಿ, ಟೀಚರ್ಸ್ ಕಾಲೋನಿ ಹಾಗೂ ಪಾರ್ವತಿ ನಗರ ಈ ಪ್ರದೇಶಗಳ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಅಲ್ಲಿನ ಸಾರ್ವಜನಿಕರು ರಸ್ತೆಗಳನ್ನು ಬ್ಲಾಕ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು.
ಈ ವಿಷಯ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗಮನಕ್ಕೆ ಬಂದ ತಕ್ಷಣ ತ್ವರಿತವಾಗಿ ಸ್ಪಂದಿಸುವ ಮೂಲಕ ಬ್ಲಾಕ್ ಮಾಡಿದ ರಸ್ತೆಗಳನ್ನು ತೆರುವುಗೊಳಿಸಿದರು. ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಭಾನುವಾರ ಸ್ಥಳೀಯ ಜನಪ್ರತಿನಿಧಿಗಳು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ ಮೊದಲಾದವರು ಸೇರಿ ಕಾಂಕ್ರೀಟ್ ರಸ್ತೆಯ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಆಯಾ ಪ್ರದೇಶಗಳ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಯುವರಾಜ ಕದಂ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ದತ್ತಾ ಪಾಟೀಲ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಜಯರಾಮ ಪಾಟೀಲ, ಬಂಡೆನವಾಜ್ ಸಯ್ಯದ್, ವಿಕ್ರಂ ಬಂಡಿ, ರಮೇಶ ಅಷ್ಟಗಿ, ಪುಂಡಲಿಕ್ ನಿಲಜಕರ್, ವಿಜಯ ಪಾವಸೆ, ಉಮೇಶ ಪಾಟೀಲ, ಅಶೋಕ್ ಮಣ್ಣಿಕೇರಿ, ಸದ್ದಾಂ ಮುಲ್ಲಾ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿ ಮೂಲೆ ಮೂಲೆಗಳಲ್ಲಿಯೂ ಅಭಿವೃದ್ಧಿ ಕೆಲಸ ಕಾರ್ಯಗಳು ಪ್ರಗತಿಯಲ್ಲಿದ್ದು, ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಕಾರ್ಯಗಳನ್ನು ತರುವ ಆಶಾ ಭಾವನೆ ಹೊಂದಿದ್ದೇನೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ವಿನಂತಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ